
ಗಂಗೊಳ್ಳಿ: ಮದುವೆಗೆಂದು ಪಡೆದುಕೊಂಡಿದ್ದ ಚಿನ್ನಾಭರಣ ಹಿಂದಿರುಗಿಸದೆ ವಂಚನೆ
Team Udayavani, Feb 6, 2023, 8:46 PM IST

ಗಂಗೊಳ್ಳಿ: ಮದುವೆಯ ಒಂದು ದಿನದ ಕಾರ್ಯಕ್ರಮಕ್ಕಾಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಪಡೆದು, ಬಳಿಕ ವಾಪಸ್ ನೀಡದೆ ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಪ್ರಕರಣದ ವಿವರ
ಮರವಂತೆಯ ಮನ್ಸೂರ್ ಇಬ್ರಾಹಿಂ ಎಂಬವರಿಂದ ಅಬ್ಟಾಸ್ ಬಡಾಕೆರೆ, ನಾವುಂದದ ಸುಲೈಮಾನ್, ಗುಲ್ವಾಡಿಯ ಉಬೈದುಲ್ಲಾ ಎಂಬವರು ಎರಡು ವರ್ಷಗಳ ಹಿಂದೆ ಮದುವೆ ಕಾರ್ಯಕ್ರಮಕ್ಕೆಂದು ಪತ್ನಿ, ಮಕ್ಕಳ ಚಿನ್ನಾಭರಣ ಕೇಳಿ ಪಡೆದುಕೊಂಡು ಹೋಗಿದ್ದರು. ಒಂದು ದಿನದ ಕಾರ್ಯಕ್ರಮ ಮುಗಿಸಿ ಹಿಂದಿರುಗಿಸುವುದಾಗಿ ತಿಳಿಸಿದ್ದರು. ಅದರಂತೆ ಇಬ್ರಾಹಿಂ ಅವರು ಪತ್ನಿಯ 3 ನೆಕ್ಲೆಸ್, ಮಕ್ಕಳ ಬ್ರಾಸ್ಲೆಟ್, ಚೈನ್, ಬಳೆ, ಮತ್ತೂಂದು ಚೈನ್ ಸಹಿತ ಒಟ್ಟು 4.50 ಲಕ್ಷ ರೂ. ಮೌಲ್ಯದ 12 ಪವನ್ ಚಿನ್ನಾಭರಣವನ್ನು ನೀಡಿದ್ದರು. ಆದರೆ ಅವುಗಳನ್ನು ಹಿಂದಿರುಗಿಸದೆ ವಂಚಿಸಲಾಗಿದೆ ಎಂದು ಮನ್ಸೂರ್ ಇಬ್ರಾಹಿಂ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಚಾರಿಸಿದಾಗ ಚಿನ್ನಾಭರಣಗಳನ್ನು ವಿವಿಧ ಹಣಕಾಸು ಸಂಸ್ಥೆಯಲ್ಲಿ ಅಡವಿಟ್ಟಿರುವುದಾಗಿ ಹಾಗೂ ಒಂದು ತಿಂಗಳಲ್ಲಿ ಬಿಡಿಸಿಕೊಡುವುದಾಗಿ ನಂಬಿಸಿದ್ದಾರೆ. ಮತ್ತೆ ವಿಚಾರಿಸಿದಾಗ 4 ಲಕ್ಷ ರೂ. ನೀಡುವಂತೆ ಕೇಳಿದ್ದು, 6 ತಿಂಗಳಲ್ಲಿ ವಾಪಸ್ ನೀಡುವುದಾಗಿ ನಂಬಿಸಿ, ಪಡೆದುಕೊಂಡಿದ್ದಾರೆ. ಆದರೆ ಹಣ ಹಾಗೂ ಚಿನ್ನವನ್ನೂ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳಲ್ಲಿ ಮುಟ್ಟಿನ ರಜೆ ನೀಡಲು ಕಾನೂನು ಜಾರಿ ಇಲ್ಲ: ಕೇಂದ್ರ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್