Udayavni Special

GKVK ಕೋವಿಡ್‌ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ಬೆವರಿಳಿಸಿದ ಡಿಸಿಎಂ


Team Udayavani, Jul 16, 2020, 9:23 PM IST

GKVK ಕೋವಿಡ್‌ ಆರೈಕೆ ಕೇಂದ್ರದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ಬೆವರಿಳಿಸಿದ ಡಿಸಿಎಂ

ಬೆಂಗಳೂರು: ಜಿಕೆವಿಕೆಯಲ್ಲಿ ಸ್ಥಾಪಿಸಲಾಗಿರುವ 712 ಹಾಸಿಗೆಗಳ ಕೋವಿಡ್‌ ಕೇರ್‌ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಅಲ್ಲಿನ ಅವ್ಯವಸ್ಥೆಗಳ ಕರ್ಮಕಾಂಡವನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗಡದುಕೊಂಡ ಪ್ರಸಂಗ ನಡೆಯಿತು.

ಗುರುವಾರ ಕೊವಿಡ್‌ ಕೇರ್‌ ಸೆಂಟರ್‌ ಗೆ ದಿಢೀರ್‌ ಭೇಟಿ ನೀಡಿದಾಗ ಸೋಂಕಿಗೆ ಹೆದರಿರುವ ವೈದ್ಯರು, ಕಂದಾಯ, ಬಿಬಿಎಂಪಿ ಅಧಿಕಾರಿಗಳ ತೀವ್ರ ನಿರ್ಲಕ್ಷ್ಯದಿಂದ ರೋಗಿಗಳು ನರಕ ಸದೃಶ್ಯ ಯಾತನೆ ಅನುಭವಿಸುತ್ತಿರುವುದನ್ನು ಕಣ್ಣಾರೆ ಕಂಡ ಅವರು, ಅಧಿಕಾರಿಗಳ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಚಿಕಿತ್ಸೆ, ಔಷಧೋಪಚಾರ, ಸ್ವತ್ಛತೆ, ಊಟದ ವ್ಯವಸ್ಥೆ, ಶೌಚಾಲಯದ ನೈರ್ಮಲ್ಯ, ಹಾಸಿಗೆಯ ಮೇಲಿನ ಬಟ್ಟೆ ಬದಲಿಸುವುದೂ ಸೇರಿದಂತೆ ಯಾವುದೇ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಅಧಿಕಾರಿಗಳು ಮತ್ತು ವೈದ್ಯರ ಅಸಡ್ಡೆಯಿಂದ ರೋಗಿಗಳು ನರಳುವಂತೆ ಆಗಿದೆ. ಇದೆಲ್ಲವನ್ನೂ ಪ್ರತ್ಯಕ್ಷವಾಗಿ ಗಮನಿಸಿದ ಉಪ ಮುಖ್ಯಮಂತ್ರಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಅಳಲು ತೋಡಿಕೊಂಡ ಸೋಂಕಿತರು:
ಆರೈಕೆ ಕೇಂದ್ರದಲ್ಲೇ ಸೋಂಕಿತರ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಮುಂದೆ ತಮಗಾಗುತ್ತಿರುವ ತೊಂದರೆಗಳನ್ನು ರೋಗಿಗಳು ಎಳೆಎಳೆಯಾಗಿ ಬಿಡಿಸಿಟ್ಟರು. ವೈದ್ಯರು ಒಳಕ್ಕೇ ಬರುತ್ತಿಲ್ಲ. ನಮ್ಮ ಯಾವುದೇ ಸಮಸ್ಯೆಗೂ ಸ್ಪಂದಿಸುತ್ತಿಲ್ಲ. ಪ್ರಶ್ನೆಗಳಿಗೆ ಉತ್ತರ ಕೊಡುತ್ತಿಲ್ಲ. ನಮ್ಮನ್ನು ತೀರಾ ನಿರ್ಲಕ್ಷ್ಯ, ಅಸಡ್ಡೆಯಿಂದ ನೋಡಲಾಗುತ್ತಿದೆ ಎಂದು ಕಣ್ಣೀರು ಹಾಕಿದರು. ಇದೆಲ್ಲವನ್ನು ಕೇಳಿ ಆಘಾತಕ್ಕೊಳಗಾದ ಡಿಸಿಎಂ ಅಧಿಕಾರಿಗಳ ಮೇಲೆ ಕೆಂಡಾಮಂಡಲಗೊಂಡರು.

ಡಿಸಿಎಂ ಬಂದ ಮೇಲೆ ಬಂದ ವೈದ್ಯೆ:
ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ನಿಯೋಜನೆಗೊಂಡು ಜಿಕೆವಿಕೆ ಕೋವಿಡ್‌ ಕೇರ್‌ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಡಿಕಲ್‌ ನೋಡೆಲ್‌ ಅಧಿಕಾರಿ ಡಾ. ಸೌಮ್ಯಾ ಎಂಬುವವರು ಡಿಸಿಎಂ ಬಂದಾಗ ಅಲ್ಲಿರಲಿಲ್ಲ. ಸ್ವಲ್ಪಹೊತ್ತಿನ ನಂತರ ಬಂದ ಅವರನ್ನು ಡಿಸಿಎಂ ತೀವ್ರ ತರಾಟೆಗೆ ತೆಗೆದುಕೊಂಡರು. ಮುಖ್ಯ ವೈದ್ಯೆಯಾಗಿದ್ದರೂ ಇವರು ಕೇರ್‌ ಸೆಂಟರಿನ ಒಳಕ್ಕೇ ಹೋಗುತ್ತಿಲ್ಲವೆಂದು ಅಲ್ಲಿನ ರೋಗಿಗಳು ದೂರಿದರು. ಸಂಜೆ ಒಳಗಾಗಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ನಗರದ ಕೋವಿಡ್‌ ಉಸ್ತುವಾರಿ ಕೇಂದ್ರಗಳ ಅಧಿಕಾರಿ ರಾಜೇಂದ್ರ ಕುಮಾರ್‌ ಕಟಾರಿಯಾ ಅವರಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.

ಹಾಗೆಯೇ, ಜಿಕೆವಿಕೆ ಕೋವಿಡ್‌ ಕೇಂದ್ರದ ವ್ಯವಸ್ಥಾಪಕ ಅಧಿಕಾರಿ ಆಗಿರುವ ತಹಸೀಲ್ದಾರ್‌ ಡಾ. ಗಣೇಶ್‌ , ಇಡೀ ಕೇಂದ್ರದ ಸಂಪೂರ್ಣ ಉಸ್ತುವಾರಿಯೂ ಆಗಿರುವ ಬಿಬಿಎಂಪಿ ಜಂಟಿ ಆಯುಕ್ತ ಅಶೋಕ್‌ ಅವರಿಗೂ ಎಚ್ಚರಿಕೆ ನೀಡಿದರು.
ಇದೇ ಕ್ಯಾಂಪಸ್ಸಿನ ತೋಟಗಾರಿಕಾ ಮಹಾವಿದ್ಯಾಲಯದಲ್ಲಿನ ಮತ್ತೂಂದು ಆರೈಕೆ ಕೇಂದ್ರ ಉತ್ತಮವಾಗಿದ್ದು, ಅಲ್ಲಿನ ವ್ಯವಸ್ಥೆ ಬಗ್ಗೆ ಡಿಸಿಎಂ ತೃಪ್ತಿ ವ್ಯಕ್ತಪಡಿಸಿದರು. ವೈದ್ಯರು, ನರ್ಷ್‌ ಗಳು, ಸ್ವತ್ಛತಾ ಸಿಬ್ಬಂದಿ, ಊಟ, ಔಷಧಿ, ಚಿಕಿತ್ಸೆ ಯಾವುದರ ಬಗ್ಗೆಯೂ ಅಲ್ಲಿ ದೂರುಗಳು ಬರಲಿಲ್ಲ. ಅಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ಡಿಸಿಎಂ ಅಶ್ವತ್ಥ ನಾರಾಯಣ್ ಶ್ಲಾಘಿಸಿದರು.

ಜ್ಞಾನಭಾರತಿಯಲ್ಲಿ ಆರೈಕೆ ಕೇಂದ್ರ:
ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್ಸಿನಲ್ಲಿ ಸ್ಥಾಪನೆ ಮಾಡಲಾಗಿರುವ ನೂತನ ಕೋವಿಡ್‌ ಕೇರ್‌ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುರುವಾರದಿಂದಲೇ ರೋಗಿಗಳನ್ನು ಶಿಫ್ಟ್ ಮಾಡಲಾಗುತ್ತಿದೆ. ಇಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಭಾಗದಲ್ಲಿ ಪಾಸೀಟೀವ್‌ ಬಂದವರನ್ನು ಇಲ್ಲಿ ದಾಖಲು ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:
ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡದ, ಪರಿಸ್ಥಿತಿ ದುರ್ಲಾಭ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸರಕಾರ ಮುಂದಾಗಿದೆ. ಈಗಾಗಲೇ ವಿಕ್ರಂ ಆಸ್ಪತ್ರೆ, ಜಯನಗರದ ಅಪೋಲೋ ಆಸ್ಪತ್ರೆಗೆ ನೊಟೀಸ್‌ ನೀಡಲಾಗಿದೆ. ಇನ್ನು ಕೆಲ ಆಸ್ಪತ್ರೆಗಳು ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಜತೆಗೆ ಸರಕಾರಕ್ಕೆ ನೀಡಬೇಕಾದ ಶೇ.50ರಷ್ಟು ಬೇಡ್‌’ಗಳನ್ನು ನೀಡದೇ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ಸರಕಾರ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಇಂಥ ಆಸ್ಪತ್ರೆಗಳ ಮಾನ್ಯತೆ ರದ್ದು ಮಾಡುವುದರ ಜತೆಗೆ, ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗುತ್ತಿದೆ ಎಂದು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

kuamarswami

ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ಇಂದು ನನಸು: H.D ಕುಮಾರಸ್ವಾಮಿ

kanayadi

ಶ್ರೀರಾಮಕ್ಷೇತ್ರ ಕನ್ಯಾಡಿ: ಸೀತಾ-ರಾಮ ಪರಿವಾರ ದೇವರುಗಳ ಅಮೃತಶಿಲೆ ಮೂರ್ತಿಗಳ ಪ್ರತಿಷ್ಠಾಪನೆ

58

ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ; ಯಾರೆಲ್ಲ ಭಾಗವಹಿಸಲಿದ್ದಾರೆ

chikkamagaluru

ಚಿಕ್ಕಮಗಳೂರು: ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ ಜನತೆ, ಹೆಬ್ಬಾಳೆ ಸೇತುವೆ ಮುಳುಗಡೆ ಆತಂಕ

SHABARI

ರಾಮಮಂದಿರ ಶಿಲಾನ್ಯಾಸ: ಪುರಾಣಪ್ರಸಿದ್ಧ ರಾಮದುರ್ಗದ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ

ಸಾಕಾರಗೊಳ್ಳಲಿದೆ ಭವ್ಯ ಶಿಲಾಮಯ ದೇಗುಲ

ಸಾಕಾರಗೊಳ್ಳಲಿದೆ ಭವ್ಯ ಶಿಲಾಮಯ ದೇಗುಲ

Live: ಭೂಮಿ ಪೂಜೆ-ಲಕ್ನೋಗೆ ಆಗಮಿಸಿದ ಮೋದಿ, ಅಯೋಧ್ಯೆಗೆ ಭೇಟಿ ಕೊಟ್ಟ ಮೊದಲ ಪ್ರಧಾನಿ

Live: ಭೂಮಿ ಪೂಜೆ-ಲಕ್ನೋಗೆ ಆಗಮಿಸಿದ ಮೋದಿ, ಅಯೋಧ್ಯೆಗೆ ಭೇಟಿ ಕೊಟ್ಟ ಮೊದಲ ಪ್ರಧಾನಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kuamarswami

ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ಇಂದು ನನಸು: H.D ಕುಮಾರಸ್ವಾಮಿ

dkc

ಶಿರಾ ಶಾಸಕ ಸತ್ಯನಾರಾಯಣ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ

ಕಲಬುರಗಿ: ಪ್ರೊಬೆಷನರಿ KAS ಅಧಿಕಾರಿಗೆ IAS ಭಾಗ್ಯ

ಕಲಬುರಗಿ: ಪ್ರೊಬೆಷನರಿ KAS ಅಧಿಕಾರಿಗೆ IAS ಭಾಗ್ಯ; UPSCಯಲ್ಲಿ ರಾಜ್ಯಕ್ಕೆ 15ನೇ ರ‍್ಯಾಂಕ್

ಕೋವಿಡ್ ಕಳವಳ-ಆಗಸ್ಟ್ 04: 6259 ಹೊಸ ಪ್ರಕರಣಗಳು ; 6777 ಡಿಸ್ಚಾರ್ಜ್ ; 110 ಸಾವು

ಕೋವಿಡ್ ಕಳವಳ-ಆಗಸ್ಟ್ 04: 6259 ಹೊಸ ಪ್ರಕರಣಗಳು ; 6777 ಡಿಸ್ಚಾರ್ಜ್ ; 110 ಸಾವು

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ತಪಾಸಣೆ: 20 ಆಫ್ರಿಕನ್ ಪ್ರಜೆಗಳು, ನಕಲಿ ನೋಟುಗಳು ವಶಕ್ಕೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ತಪಾಸಣೆ: 20 ಆಫ್ರಿಕನ್ ಪ್ರಜೆಗಳು, ನಕಲಿ ನೋಟುಗಳು ವಶಕ್ಕೆ

MUST WATCH

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavani

udayavani youtube

MALASIYAN ಹಣ್ಣುಗಳನ್ನು ಬೆಳೆದು ಯಶಸ್ಸನ್ನು ಕಂಡ Khajane Agricultural farm

udayavani youtube

ಸುಶಾಂತ್ ಸಾವಿನ ಸುತ್ತ ಅನುಮಾನದ ಹುತ್ತ | Sushant Singh Rajput Death Mystery

udayavani youtube

“ಕಟ್ಟಿಹುದು ಬುತ್ತಿ ಉಣಲುಂಟು ತಾಳು” ಎಂದು ಜೀವನ ಪಾಠ | Life Lessons by Farmerಹೊಸ ಸೇರ್ಪಡೆ

kuamarswami

ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ಇಂದು ನನಸು: H.D ಕುಮಾರಸ್ವಾಮಿ

ಸೀಲ್‌ಡೌನ್‌ ನಿಯಮ ಉಲ್ಲಂಘನೆ ಬೇಡ

ಸೀಲ್‌ಡೌನ್‌ ನಿಯಮ ಉಲ್ಲಂಘನೆ ಬೇಡ

ಸೇತುವೆ, ರಸ್ತೆ  ಕಾಮಗಾರಿಗೆ ಚಾಲನೆ

ಸೇತುವೆ, ರಸ್ತೆ ಕಾಮಗಾರಿಗೆ ಚಾಲನೆ

Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ

Watch Live: ಕಳೆಗಟ್ಟಿದ ಅಯೋಧ್ಯೆ – ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ

kanayadi

ಶ್ರೀರಾಮಕ್ಷೇತ್ರ ಕನ್ಯಾಡಿ: ಸೀತಾ-ರಾಮ ಪರಿವಾರ ದೇವರುಗಳ ಅಮೃತಶಿಲೆ ಮೂರ್ತಿಗಳ ಪ್ರತಿಷ್ಠಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.