70ರ ಅನಸೂಯಾ ಅವರಿಗೆ ಸಂಸ್ಕೃತದಲ್ಲಿ ಚಿನ್ನ


Team Udayavani, Apr 10, 2021, 11:25 PM IST

70ರ ಅನಸೂಯಾ ಅವರಿಗೆ ಸಂಸ್ಕೃತದಲ್ಲಿ ಚಿನ್ನ

ಬೆಂಗಳೂರು: ಮೂರು ದಶಕಗಳಿಗೂ ಅಧಿಕ ಕಾಲ ಭಾರತೀಯ ಸೇನೆಯಲ್ಲಿ ವೈದ್ಯೆಯಾಗಿ ಸೇವೆ, ನಿವೃತ್ತಿ ಬಳಿಕ ವೈದ್ಯಕೀಯ ವೃತ್ತಿಯ ಜತೆಗೆ ಸಂಸ್ಕೃತದಲ್ಲಿ ವಿಶೇಷ ಆಸಕ್ತಿ. ಇದು ಸಂಸ್ಕೃತ ವಿಶ್ವವಿದ್ಯಾನಿಲಯದಿಂದ ಸ್ವರ್ಣಪದಕ ವಿಜೇತರಾಗಿರುವ 70ರ ಹರೆಯದ ರಾಮಯ್ಯ ಅನಸೂಯಾ ಅವರ ಕಥೆ.

ಶುಕ್ರವಾರ ನಗರದ ಗಾಯನ ಸಮಾಜದಲ್ಲಿ ಜರಗಿದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ 8ನೇ ಘಟಿಕೋತ್ಸವದಲ್ಲಿ ಶುಕ್ಲ ಯಜುರ್ವೇದ ಕ್ರಮಾಂತ (ಬಿ.ಎ.) ವಿಷಯದಲ್ಲಿ ಮೈಸೂರಿನ ಅನಸೂಯಾ ಅವರು ಪರಮ ಪೂಜ್ಯ ಶ್ರೀ ಚಿದಂಬರ ಮೂರ್ತಿ ಚಕ್ರವರ್ತಿ ಮಹಾಸ್ವಾಮಿ ಸ್ವರ್ಣ ಪದಕ ಸ್ವೀಕರಿಸಿದ್ದಾರೆ. 36 ವರ್ಷಗಳ ಸುದೀರ್ಘ‌ ಕಾಲ ಸೇನೆಯಲ್ಲಿ ವೈದ್ಯೆಯಾಗಿದ್ದ ಅವರು ನಿವೃತ್ತಿ ಬಳಿಕ ಮೈಸೂರಿನಲ್ಲೇ ವೈದ್ಯಕೀಯ ವೃತ್ತಿಯನ್ನು ಮುಂದುವರಿಸಿದರು. ಜತೆಗೆ ಸಂಸ್ಕೃತ ಅಧ್ಯಯನವನ್ನು ಆರಂಭಿಸಿದರು. ಮೈಸೂರಿನ ಮಹಾರಾಜ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಯಾಗಿರುವ ಅವರು ಶುಕ್ಲಯರ್ಜುವೇದ ಕ್ರಮಾಂತ ವಿಷಯದಲ್ಲಿ ಬಿ.ಎ. ಪದವಿಯನ್ನು ಸ್ವರ್ಣ ಪದಕದೊಂದಿಗೆ ಪೂರೈಸಿದ್ದಾರೆ. ಮುಂದೆ ಧನಂತ ವಿಷಯವಾಗಿ ಉನ್ನತಾಧ್ಯಯನ ಮಾಡುವ ಅಭಿಲಾಷೆ ಅವರದ್ದು.

ಇವರು ಎಂ.ಎ., ಪಿಎಚ್‌.ಡಿ., ಅಪ್ತಮಾಲಜಿಯಲ್ಲಿ ಎಂ.ಎಸ್‌., ಪ್ರಶುತಿ ವಿಭಾಗದಲ್ಲಿ ಎಂ.ಡಿ. ಹಾಗೂ ಆಕ್ಯೂಪಂಚರ್‌ ವಿಭಾಗದಲ್ಲಿ ಎಂ.ಡಿ. ಪದವಿ ಪಡೆದು, ಸ್ತ್ರೀರೋಗ ಹಾಗೂ ನೇತ್ರತಜ್ಞೆಯೂ ಆಗಿದ್ದಾರೆ.

ಗೌರವ ಡಿ-ಲಿಟ್‌
ಸಂಸ್ಕೃತ ವಿದ್ವಾಂಸ ಪಂ| ಮಳಗಿ ಜಯತೀರ್ಥಾಚಾರ್ಯ ಅವರಿಗೆ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರು ಕರ್ನಾಟಕ ಸಂಸ್ಕೃತ ವಿವಿಯ ಗೌರವ ಡಿ-ಲಿಟ್‌ ಪದವಿ ಪ್ರದಾನಿಸಿದರು.

ಪಂ| ಮಳಗಿ ಅವರು ಕರ್ನಾಟಕ ವಿವಿಯ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದು, ಮಾಟುಂಗದ ಮಾವುಲಿ ವಿದ್ಯಾಪೀಠದಲ್ಲಿ ಶಾಸ್ತ್ರಗಳನ್ನೂ ಅಧ್ಯಯನ ಮಾಡಿದ್ದರು. ಸಂಸ್ಕೃತ ಪಂಡಿತ ಎಸ್‌. ಕಣ್ಣನ್‌ ಅವರಿಗೆ ಡಿ-ಲಿಟ್‌ ಪದವಿ ಪ್ರದಾನ ಮಾಡಲಾಯಿತು. 30 ಮಂದಿಗೆ ಪಿಎಚ್‌.ಡಿ ಪದವಿ ಹಾಗೂ 43 ಮಂದಿಗೆ ಎಂ.ಫಿಲ್‌. ಪದವಿ ನೀಡಲಾಯಿತು.

ಪಶ್ಚಿಮ ಬಂಗಾಳ ಬೇಲೂರಿನ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾ ನಿಲಯದ ವಿಶ್ರಾಂತ ಕುಲಪತಿ ಸ್ವಾಮಿ ಅತ್ಮಪ್ರಿಯಾನಂದ ಅವರು ಕೋಲ್ಕತಾದಿಂದಲೇ ವರ್ಚುವಲ್‌ ಮೂಲಕ ಘಟಿಕೋತ್ಸವ ಭಾಷಣ ಮಾಡಿದರು.

ಸೇನೆ ಯಲ್ಲಿ ಸೇವೆ ಸಲ್ಲಿಸಿದ್ದರಿಂದ ಉತ್ಸಾಹ ಎಂದೂ ಕುಂದಲಿಲ್ಲ. ಗುಜರಾತ್‌ನಲ್ಲಿದ್ದಾಗ ಗಾಯಾಳು ಯೋಧರಿಗೆ ಚಿಕಿತ್ಸೆ ನೀಡಿದ್ದು ಇಂದಿಗೂ ಸ್ಮತಿಪಟಲದಲ್ಲಿ ಅಚ್ಚಳಿಯದೆ ಉಳಿದಿದೆ. ಸಂಸ್ಕೃತದ ಬಗ್ಗೆ ಮೊದಲೇ ಆಸಕ್ತಿ ಇತ್ತು.
– ರಾಮಯ್ಯ ಅನಸೂಯಾ

ಟಾಪ್ ನ್ಯೂಸ್

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

ishwarappa-15

ಕಾಂಗ್ರೆಸ್‍ಗೆ ನಾಯಕತ್ವ, ಸಂಘಟನೆ, ಸಾಧನೆ ಇಲ್ಲ: ಈಶ್ವರಪ್ಪ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.