
ಇಂದಿನಿಂದ ಸರಕಾರಿ ಬಸ್ ಸಂಚಾರ : ದಕ್ಷಿಣ ಕನ್ನಡ, ಮೈಸೂರು ಬಿಟ್ಟು ಉಳಿದೆಡೆ ಆರಂಭ
Team Udayavani, Jun 21, 2021, 7:40 AM IST

ಬೆಂಗಳೂರು : ಸೋಮವಾರದಿಂದ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಸರಕಾರಿ ಬಸ್‌ಗಳ ಸಂಚಾರ ಆರಂಭವಾಗಲಿದೆ.
ಅನ್‌ಲಾಕ್ ಆದೇಶದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿಯ ಎಲ್ಲ ಪ್ರಕಾರಗಳ ಬಸ್‌ಗಳು ರಾತ್ರಿ ಕರ್ಫ್ಯೂ ಅವಧಿ ಸಹಿತ ದಿನಪೂರ್ತಿ ಸಂಚರಿಸಲಿವೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ನಿಗಮವು ಅನುಸೂಚಿಗಳ ವ್ಯವಸ್ಥೆ ಕಲ್ಪಿಸಲಿದೆ.
ಮೈಸೂರಿಗೆ ಬಸ್ ವ್ಯವಸ್ಥೆ ಇರುವುದಿಲ್ಲ. ಮೈಸೂರು ದಾಟಿ ಹೋಗಬೇಕಾದ ಬಸ್‌ಗಳು ಹೊರವಲಯದ ಮೂಲಕವೇ ಹಾದುಹೋಗಬೇಕು. ಜಿಲ್ಲೆಯಲ್ಲಿ ಯಾರಿಗೂ ಬಸ್ಸೇರಲು, ಇಳಿಯಲು ಅವಕಾಶವಿಲ್ಲ. ಸ್ಥಳೀಯ ಸಾರಿಗೆ ಇರುವುದಿಲ್ಲ.
ಪ್ರಯಾಣಿಕರು ಮತ್ತು ಸಿಬಂದಿಯ ಹಿತದೃಷ್ಟಿಯಿಂದ ಎರಡೂ ಲಸಿಕೆ ಪಡೆದ ಸಿಬಂದಿಯನ್ನು ಆದ್ಯತೆಯ ಮೇರೆಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ದ.ಕ.ದಲ್ಲಿ ಬಸ್ ಇಲ್ಲ
ರವಿವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2ನೇ ಹಂತದ ಸಡಿಲಿಕೆಯ ಆದೇಶ ಹೊರಡಿಸಿದ್ದು, ಜಿಲ್ಲೆಯ ಮೂಲಕ ಮತ್ತು ಒಳಗೆ ಬಸ್ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮಂಗಳೂರು ಸರಹದ್ದಿನ ಹೊರಗೆ ಬಸ್‌ಗಳು ನಿಲುಗಡೆ ಆಗಲಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ