ವೈದ್ಯ, ದಂತ ವೈದ್ಯ ಕಾಲೇಜು ಆರಂಭಕ್ಕೆ ಅನುಮತಿ
Team Udayavani, Jul 17, 2021, 7:20 AM IST
ಬೆಂಗಳೂರು: ರಾಜ್ಯ ಸರಕಾರವು ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಮತ್ತು ಅರೆ ವೈದ್ಯಕೀಯ ಕೋರ್ಸ್ಗಳ ಭೌತಿಕ ತರಗತಿ ನಡೆಸಲು ಅನುಮತಿ ನೀಡಿದೆ.
ಈ ಶಿಕ್ಷಣ ಸಂಸ್ಥೆಗಳ ಬಹುತೇಕ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬಂದಿ ಈಗಾಗಲೇ ಲಸಿಕೆಯ ಮೊದಲ ಡೋಸ್ ಪಡೆದಿರುವ ಹಿನ್ನೆಲೆಯಲ್ಲಿ ತರಗತಿ ನಡೆಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ.
ಸೋಮವಾರದಿಂದ ರಾಜ್ಯದ ಈ ಶಿಕ್ಷಣ ಸಂಸ್ಥೆಗಳು ಭೌತಿಕ ತರಗತಿ ನಡೆಸಲಿವೆ. ಈ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.ಯಿಂದ ಕಾಲೇಜುಗಳಿಗೆ ಅಧಿಕೃತ ಸೂಚನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕನಿಷ್ಠ ಒಂದು ಡೋಸ್ ಪಡೆ ದಿರುವ ವಿದ್ಯಾರ್ಥಿಗಳು, ಬೋಧಕ, ಸಿಬಂದಿ ಮಾತ್ರ ವೈದ್ಯಕೀಯ ಶಿಕ್ಷಣ ಸಂಸ್ಥೆ ಅಥವಾ ಕಾಲೇಜಿಗೆ ಬರಲು ಅವಕಾಶವಿದೆ. ಕೊರೊನಾ ತಡೆ ಮಾರ್ಗಸೂಚಿ, ಎಸ್ಒಪಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..