ಶಿವಮೊಗ್ಗ: ಹತ್ಯೆಗೀಡಾದ ಹರ್ಷ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರಕಾರ
Team Udayavani, Mar 3, 2022, 5:27 PM IST
ಶಿವಮೊಗ್ಗ: ಫೆಬ್ರವರಿ 20 ರಂದು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.
ಮಾರ್ಚ್ 6 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹರ್ಷ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ಹಸ್ತಾಂತರಿಸುವುದಾಗಿ ಈಶ್ವರಪ್ಪ ಹೇಳಿದ್ದಾರೆ.
ಆನ್ ಲೈನ್ ಅಭಿಯಾನದ ಮೂಲಕ ಇದುವರೆಗೆ ಹರ್ಷ ಅವರ ತಾಯಿಯ ಖಾತೆಗೆ 60 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿರುವುದಾಗಿ ತಿಳಿದು ಬಂದಿದೆ.
ಅಚ್ಚರಿ ಮೂಡಿಸಿದೆ
2015 ರಲ್ಲಿ ಹತ್ಯೆಗೀಡಾದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗಿತ್ತು. ಆತನ 2 ನೇ ಪತ್ನಿ ತಂದೆ, ತಾಯಿಯನ್ನು ಬಿಟ್ಟು ಹೋಗಿದ್ದಾಳೆ. ಈಗ ವಿಶ್ವನಾಥ್ ತಾಯಿ ಮಾತ್ರ ಬದುಕಿದ್ದಾರೆ. ಅವರಿಗೆ ಸಂಘ ಪರಿವಾರ ಮತ್ತು ಬಿಜೆಪಿ ಆರ್ಥಿಕ ಪರಿಹಾರ ನೀಡಲಿದೆ. ಕಾಂಗ್ರೆಸ್ ಅವರಿಗೆ ಸಾಂತ್ವನ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ