ಸೆಂಟ್ರಲ್ ವಿಸ್ತಾ ಕಾಮಗಾರಿ ಮೇಲ್ವಿಚಾರಣೆಗಾಗಿ ಸಮಿತಿ
Team Udayavani, Nov 27, 2021, 9:30 PM IST
ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸೆಂಟ್ರಲ್ ವಿಸ್ತಾದ ಕಾಮಗಾರಿಯ ಮೇಲ್ವಿಚಾರಣೆ ನಡೆಸಲೆಂದು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿಯು ವಿಸ್ತಾದ ಕಾಮಗಾರಿ ಪರಿಶೀಲನೆ, ವಿವಿಧ ಸಚಿವಾಲಯಗಳ ನಡುವೆ ಸಮನ್ವಯ ಸೇರಿ ಅನೇಕ ರೀತಿಯ ಜವಾಬ್ದಾರಿ ನಿರ್ವಹಿಸಲಿದೆ.
ಸೆಂಟ್ರಲ್ ವಿಸ್ತಾ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಮುಗಿಸುವ ಯೋಜನೆ ಹಾಕಿಕೊಂಡಿರುವುದಾಗಿ ಸರ್ಕಾರ ತಿಳಿಸಿದೆ. “ಯೋಜನೆಯ ಮುಂದಿನ ಹಂತದಲ್ಲಿ ಹಲವಾರು ಸವಾಲುಗಳು ಎದುರಾಗುವ ಸಾಧ್ಯತೆಯಿದೆ. ಸಾಂಸ್ಕೃತಿಕ ಸ್ಥಳಗಳ ನಿರ್ಮಾಣ, ವಿವಿಧ ಮಧ್ಯಸ್ಥರ ನಡುವೆ ಸಮನ್ವಯ ಸೇರಿ ಹಲವು ವಿಚಾರಗಳಲ್ಲಿ ಮೇಲ್ವಿಚಾರಣೆ ಅಗತ್ಯ’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಸದ್ಯ ಆನ್ಲೈನ್ ಆಧಾರದಲ್ಲಿ ಕಾಮಗಾರಿಯ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಮುಂದೆ ಆ ಕೆಲಸವನ್ನು ಸಮಿತಿಯೇ ನಿರ್ವಹಿಸಲಿದ್ದು, ಕಾಲ ಕಾಲಕ್ಕೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಸಮಿತಿಗಾಗಿ ಕಚೇರಿ ಸೇರಿ ಎಲ್ಲ ಸೌಲಭ್ಯ ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ