ಸಿದ್ದು-ಡಿಕೆಶಿಗೆ ಸಿಎಂ ಆಗುವ ಹುಚ್ಚು ಹಿಡಿದಿದೆ: ಎಚ್ಡಿಕೆ
Team Udayavani, Feb 5, 2022, 10:15 PM IST
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರಿಗೂ ಸಿಎಂ ಆಗುವ ಹುಚ್ಚು ಹಿಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದನ್ನು ಬಿಡಬೇಕು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು. ಇಬ್ಬರಿಗೂ ಓಟು ಪಡೆಯುವ ಹುಚ್ಚು ಹತ್ತಿಕೊಂಡಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಅನ್ನುವುದು ಅವರಿಗಿಲ್ಲ. ಬಿಜೆಪಿಯವರಿಗೆ ಕೂಡ ಮತ ಪಡೆಯುವ ಹುಚ್ಚು ಬಂದಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಒಬ್ಬೊಬ್ಬರು ಒಂದೊಂದು ಮಾತು ಹೇಳುತ್ತಾರೆ. ಸಿದ್ದರಾಮಯ್ಯ ಒಂದು ಮಾತು ಹೇಳಿದರೆ, ಡಿಕೆಶಿ ಒಂದು ಮಾತು ಹೇಳುತ್ತಾರೆ. ಇವರಲ್ಲಿ ಒಬ್ಬರಿಗೆ ಮುಸ್ಲಿಮರ ಮತಗಳನ್ನು ಪಡೆಯುವ ಉಮೇದು. ಮತ್ತೂಬ್ಬರಿಗೆ ಮುಸ್ಲಿಮರ ಪರ ಮಾತಾಡಿದರೆ ಏನು ಹೆಚ್ಚು ಕಡಿಮೆ ಆಗುತ್ತದೋ ಎಂಬ ಭಯ ಎಂದು ಕುಮಾರಸ್ವಾಮಿ ಅವರು ಕುಟುಕಿದರು.
ಇದನ್ನೂ ಓದಿ:ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ
ಕಾಂಗ್ರೆಸ್ ಪಕ್ಷದ್ದು ಎರಡು ನಾಲಿಗೆ:
ಮಹದಾಯಿ ನದಿ ನೀರಿನ ವಿವಾದದ ಬಗ್ಗೆ ಕಾಂಗ್ರೆಸ್ ಎರಡು ನಾಲಿಗೆ ನೀತಿ ಅನುಸರಿಸುತ್ತಿವೆ. ಮಹದಾಯಿ ಬಗ್ಗೆ ಆ ಪಕ್ಷದ ಸತೀಶ್ ಜಾರಕಿಹೊಳಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ನಿನ್ನೆ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ ಗೋವಾ ಚುನಾವಣೆ ಪ್ರಣಾಳಿಕೆಯಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರನ್ನು ಗೋವಾದಿಂದ ಬಿಟ್ಟು ಕೊಡಲ್ಲ ಅಂತ ಹೇಳಿಕೊಂಡಿದಾರೆ. ಇದು ಅವರ ದ್ವಿಮುಖ ನೀತಿ ತೋರಿಸುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಕಾಂಗ್ರೆಸ್ ತೊರೆದಿರುವ ಸಿಎಂ ಇಬ್ರಾಹಿಂ ಅವರು ಒಳ್ಳೆಯ ನಿರ್ಧಾರವನ್ನು ಕೈಗೊಳ್ಳಲಿ¨ªಾರೆ. ಇಬ್ರಾಹಿಂ ಮೊದಲಿನಿಂದಲೂ ಜೆಡಿಎಸ್ ಜತೆ ಗುರುತಿಸಿಕೊಂಡವರು. ನಡುವೆ ಕೆಲ ವ್ಯತ್ಯಾಸಗಳು ಆಗಿದ್ದವು. ಈಗ ಮತ್ತೆ ಜೆಡಿಎಸ್ ಜತೆ ಸೇರಿ ಮತ್ತೂಂದು ರಂಗ ರಚನೆ ಬಗ್ಗೆ ಅವರು ಮುಂದಾದರೆ ಸ್ವಾಗತ ಮಾಡುವೆ.’
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್