ಗ್ರಾಮೀಣ ಕನ್ನಡದಲ್ಲಿ ಮಿಣಿಮಿಣಿ ಎಂದರೆ….. ಟ್ವೀಟ್ಟರ್ ನಲ್ಲಿ ಕುಮಾರಸ್ವಾಮಿ

Team Udayavani, Jan 28, 2020, 1:41 PM IST

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿರುವ ‘ಮಿಣಿ ಮಿಣಿ’ ಹೇಳಿಕೆ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಬಿಜೆಪಿಯ ಮೇಲೆ ಮತ್ತೆ ಹರಿಹಾಯ್ದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಗ್ರಾಮೀಣ ಕನ್ನಡದಲ್ಲಿ ಹೊಳೆಯುವ ಪದಾರ್ಥಕ್ಕೆ ಮಿಣಿಮಿಣಿ ಎನ್ನಲಾಗುತ್ತದೆ. ಅದು ಶುದ್ಧ ಕನ್ನಡ ಗ್ರಾಮೀಣ ಪದ ಎಂದಿದ್ದಾರೆ.

ಟ್ರೋಲ್ ಗಳ ಬಗ್ಗೆ ಕಿಡಿಕಾರಿರುವ ಅವರು, ದೇಶದಲ್ಲಿ ಇಂದು ನಡೆಯುತ್ತಿರುವುದು ಕುಟಿಲ ರಾಜಕಾರಣ. ಅದರ ಭಾಗವೇ ಕೊಂಕು, ಟ್ರೋಲ್ಗಳು. ಒಬ್ಬ ನಾಯಕನ ವಿರುದ್ಧ ಎದುರು ನಿಂತು ಹೋರಾಡಲಾಗದ ಹೇಡಿಗಳು ಗೇಲಿ, ಅಪಹಾಸ್ಯದ ತಂತ್ರದ ಮೂಲಕ ನಾಯಕನ‌ ಹನನಕ್ಕೆ ನಿಲ್ಲುತ್ತಾರೆ. ಮಿಣಿ ಮಿಣಿ ಎಂಬ ಶಬ್ಧ ಇಟ್ಟುಕೊಂಡು ಬಿಜೆಪಿ‌ ಮಾಡುತ್ತಿರುವುದು ಅದೇ ಹೇಡಿಗಳ ಕೆಲಸ‌ ಎಂದಿದ್ದಾರೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ