ಮಧ್ಯಂತರಕ್ಕೆ ಗೌಡರ ಹಠ

Team Udayavani, Jul 2, 2019, 6:00 AM IST

HD-Devegowda–800

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಜತೆಗಿನ ಸಖ್ಯ ಮುರಿದುಕೊಳ್ಳಲು ಕಾಂಗ್ರೆಸ್‌ ನಾಯಕರು ಮುಂದಾದರೆ ಅಥವಾ ಶಾಸಕರ ರಾಜೀನಾಮೆ ಪ್ರಹಸನ ಮುಂದುವರಿದರೆ ಮಧ್ಯಂತರ ಚುನಾವಣೆಯೇ ಆಗಲಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಠಕ್ಕೆ ಬಿದ್ದಿದ್ದಾರೆ.

ಪ್ರಸಕ್ತ ವಿದ್ಯಮಾನಗಳು ಹಾಗೂ ದೆಹಲಿಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡಿದ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್‌.ಡಿ.ದೇವೇಗೌಡರ “ವರಸೆ’ ಬದಲಾಗಿದ್ದು,
ಚುನಾವಣೆಗೆ ಹೋಗೋಣ ಆ ನಂತರ ಮುಂದಿನ ಮಾತು ಎಂದು ಖಡಕ್‌ ನಿರ್ಧಾರಕ್ಕೆ ಬಂದಿದ್ದಾರೆ.

ಈ ಸರ್ಕಾರ ಎಷ್ಟು ದಿನ ಇರುತ್ತೋ, ಎರಡೂ ಪಕ್ಷಗಳು ಹೊಂದಿಕೊಂಡು ಹೋದರೆ ನಾಲ್ಕು ವರ್ಷದ ನಂತರ ಚುನಾವಣೆ ಬರುತ್ತದೆ ಎಂಬ ಹೇಳಿಕೆಗಳು ದೇವೇಗೌಡರ ನಡೆ ಬಲ್ಲವರಿಗೆ ಬಹುಬೇಗ ಅರ್ಥವಾಗುತ್ತವೆ. ದಿಢೀರ್‌ ಹಿಂದುಳಿದ ವರ್ಗಗಳ ಸಮಾವೇಶ,ಮಹಿಳಾ ಸಮಾವೇಶ, ಜಾತಿವಾರು-ಸಮುದಾಯವಾರು ಮುಖಂಡರ ಸಭೆ ಆಯೋಜಿಸುವ ಮೂಲಕ ಮಧ್ಯಂತರ ಚುನಾವಣೆಯ ಸಿದಟಛಿತೆ ಆರಂಭಿಸಿರುವ
ದೇವೇಗೌಡರು ಆ ನಿಟ್ಟಿನಲ್ಲಿ ಬಹಳ ದೂರ ಹೋಗಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪಕ್ಷದ ನಾಯಕರು ಯಾರಾದರೂ ಕೇಳಿದರೆ, ಚುನಾವಣೆ ಯಾವಾಗಲಾದರೂ ಬರಲಿ ಪಕ್ಷ ಕಟ್ಟುವುದುಬೇಡವೇನ್ರಿ ಎಂದು ಪ್ರಶ್ನಿಸುತ್ತಿದ್ದಾರೆ. ಸಿದ್ದರಾಮಯ್ಯಅವರು ಮತ್ತೆ ಅಹಿಂದ ಸಮಾವೇಶಗಳತ್ತ ಮುಖಮಾಡಿರುವುದರಿಂದ ಏನೋ ಬದಲಾವಣೆ ನಡೆಯುತ್ತಿದೆ ಎಂಬ ಸುಳಿವು ಗೌಡರಿಗೆ ಸಿಕ್ಕಿದೆ.

ಹೀಗಾಗಿಯೇ, ಒಂದೊಮ್ಮೆ ದಿಢೀರ್‌ ಚುನಾವಣೆಗೆ ಹೋಗುವ ಸ್ಥಿತಿ ನಿರ್ಮಾಣವಾದರೆ ಪಕ್ಷ ಸಂಘಟನೆಯಾಗದಿದ್ದರೆ ಕಷ್ಟ ಎಂದು ಪಕ್ಷ ಕಟ್ಟುವ ಮಾತನಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಗಮನಿಸಿದರೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ದೇವೇಗೌಡರಿಗೆ ಬೇರೆಯದೇ ಸಂದೇಶ ಬಂದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಮತ್ತೂಂದು ಮೂಲಗಳ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಒಳಗೊಳಗೆ ಸಮ್ಮಿಶ್ರ ಸರ್ಕಾರ ಪತನಕ್ಕೆ ನಡೆಸುತ್ತಿರುವ ಪ್ರಯತ್ನಕ್ಕೆ ಬ್ರೇಕ್‌ ಹಾಕುವ ತಂತ್ರಗಾರಿಕೆ ಹಾಗೂ ಸಿದ್ದರಾಮಯ್ಯ ಅವರ ಕೈ ಮೇಲಾಗದಂತೆ ತಡೆಯುವ ಯತ್ನವೂ ಇರಬಹುದು ಎಂದು ಹೇಳಲಾಗುತ್ತಿದೆ.

‘ನಾವು ಚುನಾವಣೆಗೆ ಸಿದ್ದ. ನಿಮಗೆ ಸರ್ಕಾರ ಬೇಡ ಎಂದಾರೆ ನಮಗೂ ಬೇಡ’ ಎಂಬ ಸಂದೇಶವನ್ನು ದೇವೇಗೌಡರು ಕಾಂಗ್ರೆಸ್‌ಗೆ ರವಾನಿಸಿದ್ದಾರೆ. ಪ್ರಸಕ್ತ ವಿದ್ಯಮಾನಗಳು ಇದಕ್ಕೆ ಪುಷ್ಠಿ ನೀಡುವಂತಿವೆ.

ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಸಕ್ತಿ ಹೊಂದಿದ್ದಾರೆ. ಆದರೆ, ದೇವೇಗೌಡರು ಪಕ್ಷ ಉಳಿಸಿಕೊಳ್ಳುವ ಬಗ್ಗೆ ತಲೆಕೆಡಿಸಿ ಕೊಂಡಿದ್ದಾರೆ. ಹೀಗಾಗಿ, ಮತ್ತೆ ಅವರೇ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಸರ್ಕಾರ ಉಳಿಸಿಕೊಳ್ಳುವುದು ಕುಮಾರಸ್ವಾಮಿಗೆ ಬಿಟ್ಟಿದ್ದು. ನಾನು ಪಕ್ಷ ಕಟ್ಟು ತ್ತೇನೆ ಎಂದು ಹೇಳಿರುವ ಅವರು, ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆಯಲ್ಲಿ ಸೋಲು ಅನುಭವಿಸಿ ನಮ್ಮದೇನೂ ನಡೆಯಲ್ಲ ಎಂದು ಸುಮ್ಮನಿ ದ್ದವರನ್ನು ಮತ್ತೆ ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಮತಗಳಿಕೆ ಲೆಕ್ಕಾ ಚಾರದಲ್ಲೇ ದಲಿತ ಬಲಗೈ ಪಂಗಡದ ಎಚ್.ಕೆ. ಕುಮಾರಸ್ವಾಮಿ ಯವರನ್ನು ರಾಜ್ಯಾಧ್ಯಕ್ಷರ ನೇಮಕಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

-ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.