ರಾಜ್ಯದಲ್ಲಿ ಜೆಡಿಎಸ್ ಪರ ಅಲೆ: ಎಚ್.ಡಿ.ಕುಮಾರಸ್ವಾಮಿ
Team Udayavani, Dec 1, 2022, 10:30 PM IST
ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕೀಯದ ಸುನಾಮಿ ಅಲೆ ಎದ್ದಿದ್ದು, ಜನತಾ ದಳದ ಪರವಾಗಿದೆ. ಜೆಡಿಎಸ್‌ನ ಈ ಸುನಾಮಿ ಅಲೆಯಲ್ಲಿ ಎಲ್ಲ ಪಕ್ಷಗಳೂ ಕೊಚ್ಚಿ ಹೋಗಲಿವೆ ಎಂದರು.
ನಗರದ ಸಿದ್ಧಗಂಗಾ ಮಠಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಜನತೆ ಜೆಡಿಎಸ್‌ಗೆ ಬಹುಮತ ನೀಡುವ ತೀರ್ಮಾನ ಮಾಡಿದ್ದಾರೆ. ರಾಜಕೀಯ ಗಾಳಿ ಗಂಧ ಗೊತ್ತಿಲ್ಲದವರೂ ಸಹ ಕುಮಾರಣ್ಣ ಸಿಎಂ ಆಗಬೇಕು ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದರು.
ರಾಜ್ಯದ 36 ವಿಧಾನಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದ ಕಾರ್ಯಕ್ರಮ ನಿಗದಿ ಮಾಡಲಾಗಿದೆ. ಜನವರಿ 3 ರಿಂದ 2ನೇ ಹಂತದ ರಥಯಾತ್ರೆ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಸೇರಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಯಾತ್ರೆ ನಡೆಯಲಿದೆ ಎಂದರು.
ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಘೋಷಣೆ: ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸದ್ಯದಲ್ಲೇ ಘೋಷಣೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ರಥಯಾತ್ರೆ ಸಂಚರಿಸಿದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಡಿ. 7ರಂದು ಕೆಜಿಎಫ್ನಲ್ಲಿ ರಥಯಾತ್ರೆ ನಡೆಯಲಿದ್ದು, ಆ ಸಂದರ್ಭದಲ್ಲಿ ಆ ಜಿಲ್ಲೆಯ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತದೆ ಎಂದರು.
ಮುಂದಿನ ತಿಂಗಳಿಂದ ಪ್ರಚಾರಕ್ಕೆ ಹೋಗುತ್ತೇನೆ: ದೇವೇಗೌಡ
ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ತಮ್ಮ ಪತ್ನಿ ಜತೆ ಗುರುವಾರ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಇದರಿಂದ ಬಿಜೆಪಿಗೆ ಲಾಭ ನಷ್ಟದ ಪ್ರಶ್ನೆ ಯಲ್ಲ. ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ಧರಾಗಿಬೇಕು. ಹಾಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ.-ಎಚ್.ಡಿ. ದೇವೇ ಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ