ಕೋವಿಡ್ ವಾಸಿಯಾದವರಲ್ಲಿ ಚರ್ಮರೋಗ : ದೆಹಲಿ, ಮುಂಬೈ ನಗರಗಳಲ್ಲಿ ಕಾಣಿಸಿಕೊಂಡ ಹೊಸ ಸಮಸ್ಯೆ
Team Udayavani, Jun 7, 2021, 8:20 PM IST
ನವದೆಹಲಿ: ಕೊರೊನಾದಿಂದ ಪಾರಾದ ನಂತರ ಕೆಲವು ವ್ಯಕ್ತಿಗಳಲ್ಲಿ ಚರ್ಮರೋಗಗಳು ಕಾಣಿಸಿಕೊಳ್ಳುತ್ತಿರುವ ಹೊಸ ಸಮಸ್ಯೆಯೊಂದು ಶುರುವಾಗಿದೆ. ಉಗುರುಸುತ್ತು (ಸರ್ಪಸುತ್ತು), ಕೂದಲು ಉದುರುವುದು ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಕೊರೊನಾದಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕುಗ್ಗುವುದರಿಂದ ಇಂಥ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.
ದೆಹಲಿ, ಮುಂಬೈ ಹಾಗೂ ಇತರ ನಗರಗಳಲ್ಲಿ ಇಂಥವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾಗಾಗಿ, ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸಾcರ್ಜ್ ಆಗಿರುವವರು ಅಥವಾ ಹೋಂ ಕ್ವಾರಂಟೈನ್ನಲ್ಲಿ ಇದ್ದವರು ತಮ್ಮ ಚರ್ಮದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸಬೇಕು. ಮೇಲೆ ಹೇಳಲಾದ ಕೆಲವು ಸಮಸ್ಯೆಗಳ ಜೊತೆಗೆ, ಚರ್ಮದ ಮೇಲೆ ಕೆಂಪು ಕಲೆಗಳು ಹಾಗೂ ಊತ ಕಾಣಿಸಿಕೊಳ್ಳುತ್ತದೆ. ಇಂಥವು ಗಮನಕ್ಕೆ ಬಂದ ಕೂಡಲೇ ಚರ್ಮರೋಗ ವೈದ್ಯರನ್ನು ಸಂಪರ್ಕಿಸಬೇಕು ಎಂದು ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ. ಡಿ.ಎಂ. ಮಹಾಜನ್ ತಿಳಿಸಿದ್ದಾರೆ.
ಇದನ್ನೂ ಓದಿ :ಏಳು ಕಂಪೆನಿಗಳು ದೇಶದಲ್ಲಿ ಲಸಿಕೆಗಳನ್ನು ಉತ್ಪಾದಿಸುತ್ತಿವೆ : ನರೇಂದ್ರ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ