ಹಲ್ಲೆ ಕೇಸ್‌:ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ಗೆ ಕೊನೆಗೂ ಜಾಮೀನು

Team Udayavani, Apr 24, 2019, 11:47 AM IST

ಬೆಂಗಳೂರು : ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ಯವ್ಯದ ವೇಳೆ ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ಗೆ ಹೈಕೋರ್ಟ್‌ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬಂಧನಕ್ಕೊಳಗಾದ 62 ದಿನಗಳ ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌, ಇಬ್ಬರ ಶ್ಯೂರಿಟಿ ಪಡೆದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈಗಲ್‌ ಟನ್‌ ರೆಸಾರ್ಟ್‌ನಲ್ಲಿ ಜನವರಿ 19 ರ ರಾತ್ರಿ ಗಣೇಶ್‌ ಅವರು ಆನಂದ್‌ ಸಿಂಗ್‌ ಅವರ ಮೇಲೆ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಆನಂದ್‌ ಸಿಂಗ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ತಲೆ ಮರೆಸಿಕೊಂಡಿದ್ದ ಗಣೇಶ್‌ ಅವರನ್ನುಫೆಬ್ರವರಿ 20 ರಂದ ಅಹಮದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ