ಹೋಂ ಕ್ವಾರಂಟೈನ್ : ಶಿರ್ವದ 6 ಮನೆಗಳು ಸೀಲ್ ಡೌನ್
Team Udayavani, Jun 13, 2020, 4:45 PM IST
ಶಿರ್ವ : ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ಒಟ್ಟು 28 ಮಂದಿಯನ್ನು ಸರಕಾರದ ಆದೇಶದಂತೆ ಹೋಂ ಕ್ವಾರಂಟೈನ್ ಮಾಡಲಾಗಿದ್ದು ಅವರು ವಾಸಿಸುವ 6 ಮನೆಯನ್ನು ಶುಕ್ರವಾರ ಸಂಜೆ ಸೀಲ್ಡೌನ್ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 10 ಮಂದಿ ಮತ್ತು ಮುಂಬೈನಿಂದ ಶುಕ್ರವಾರ ಬಂದ 18 ಮಂದಿಯನ್ನು ನೇರವಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್ ನಿರ್ದೇಶನದಂತೆ ಕಂದಾಯ, ಪೊಲೀಸ್ ಮತ್ತು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿಯ 1,ಬಂಟಕಲ್ಲು ಮಾಣಿಪ್ಪಾಡಿ 2, ಶಿರ್ವ ಮಸೀದಿ ಬಳಿ 1,ಸೊಸೈಟಿ ಬಳಿ 1, ಹಾಗೂ ಜತ್ರಬೆಟ್ಟುವಿನ 1 ಮನೆ ಸೇರಿ ಒಟ್ಟು 6 ಮನೆಯನ್ನು ಸೀಲ್ಡೌನ್ ಮಾಡಲಾಗಿದ್ದು,28 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
ಮನೆಯಿಂದ ಯಾರೂ ಹೊರಗೆ ಬಾರದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ನಿಗಾ ವಹಿಸಲಾಗಿದೆ. ಗ್ರಾಮಸ್ಥರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕಾಪು ಕಂದಾಯ ಪರೀವೀಕ್ಷಕ ರವಿಶಂಕರ್, ಶಿರ್ವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಶಿರ್ವ ಪೊಲೀಸ್ ಠಾಣೆಯ ಎಎಸ್ಐ ಸುರೇಶ್, ಗ್ರಾಮ ಕರಣಿಕ ವಿಜಯ್, ಸಹಾಯಕ ಭಾಸ್ಕರ್,ಆರೋಗ್ಯ ಸಹಾಯಕಿ ಗೀತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ