ಜನಪ್ರತಿನಿಧಿ ಕೋರ್ಟ್ ನಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಖುಲಾಸೆ; ಏನಿದು ಪ್ರಕರಣ
Team Udayavani, Aug 26, 2019, 4:38 PM IST
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರಾಧಿಕಾರ(ಕಾಡಾ)ದ ಎದುರು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಸೋಮವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಭದ್ರಾ ಜಲಾಶಯದಿಂದ ಶಿವಮೊಗ್ಗದ ಕೆರೆಗಳಿಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಯ ಪೀಠೋಪಕರಣ ಧ್ವಂಸಗೊಳಿಸಿದ ಆರೋಪ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಅವರು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು ತೀರ್ಪು ನೀಡಿದರು.