
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Oct 6, 2022, 7:04 AM IST

ಮೇಷ:
ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫಲತೆ ಆಗುವುದು. ದಾಂಪತ್ಯ ಸುಖದಲ್ಲಿ ತೃಪ್ತಿ.
ವೃಷಭ:
ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ.
ಮಿಥುನ:
ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಮಾರ್ಗದರ್ಶನ.
ಕಟಕ:
ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.
ಸಿಂಹ:
ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೆ ಕಾರ್ಯ ಸಾಧಿಸಿ.
ಕನ್ಯಾ:
ಆರೋಗ್ಯದಲ್ಲಿ ವೃದ್ಧಿ. ಧಾಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ಸಮಾದಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದಾವಕಾಶ.
ತುಲಾ:
ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ.
ವೃಶ್ಚಿಕ:
ನಿರೀಕ್ಷಿತ ಸ್ಥಾನ ಗೌರವ ಆಕಾರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ. ನಿರಂತರ ಧನ ಸಂಪಾದನೆಯಿಂದ ಆತ್ಮ ಸ್ವಾಸ್ಥ್ಯ ವೃದ್ಧಿ.
ಧನು:
ಆರೋಗ್ಯದಲ್ಲಿ ಪ್ರಗತಿದಾಯಕ ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ.
ಮಕರ:
ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ.
ಕುಂಭ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನ ಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ ಪ್ರಯಾಣದಿಂದ ದೇಹಾಯಾಸ ತೋರೀತು.
ಮೀನ:
ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ದೂರದ ವ್ಯವಹಾರಗಳಲ್ಲಿ ಪ್ರಗತಿ

ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ

ರಾಶಿ ಫಲ: ಅವಿವಾಹಿತರಿಗೆ ವಿವಾಹ ಭಾಗ್ಯ, ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಉಳಿತಾಯದಲ್ಲಿ ಆಸಕ್ತಿ

ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ, ಜವಾಬ್ದಾರಿಯುತ ಕೆಲಸ ನಿರ್ವಹಣೆ

ರಾಶಿ ಫಲ: ವಿದ್ಯೆ ಜ್ಞಾನ ವಿಚಾರದಲ್ಲಿ ಪ್ರಗತಿ, ಪರೋಪಕಾರ ಮಾಡುವಾಗ ತಿಳಿದು ಮಾಡಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಹಳೆಯಂಗಡಿ ರೈಲ್ವೇ ಗೇಟ್ನಲ್ಲಿಯೇ ಉಳಿದ ಗೂಡ್ಸ್ ಡಬ್ಬಿಗಳು…!

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್