ಲಸಿಕೆ ಪಡೆದ ಕೆಲವೇ ಹೊತ್ತಿನಲ್ಲಿ ಅರೋಗ್ಯ ಸಮಸ್ಯೆ: 12 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
Team Udayavani, Mar 23, 2022, 3:15 PM IST
ಹುಮನಾಬಾದ್ : ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 12ರಿಂದ 14 ವರ್ಷದ ಮಕ್ಕಳು ಲಸಿಕೆ ಪಡೆದ ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟದ ಘಟನೆಯೊಂದು ತಾಲೂಕಿ ಹುಡಗಿ ವಲಯದಲ್ಲಿ ಬುಧವಾರ ಸಂಭವಿಸಿದೆ.
ತಾಲೂಕಿನ ಜನತಾನಗರ ಗ್ರಾಮದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಲಸಿಕೆ ಪಡೆದುಕೊಂಡಿದ್ದು, ನಂತರ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಮಕ್ಕಳಿಗೆ ಹೆಚ್ಚಿನ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ವಾಂತಿ, ತಲೆನೋವು, ತಲೆ ಸುತ್ತುವುದು ಮಕ್ಕಳಲ್ಲಿ ಕಾಣಿಸಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ। ನಾಗನಾಥ ಹುಲಸೂರೆ ಮಾಹಿತಿ ನೀಡಿದ್ದಾರೆ.
ಶಾಲೆಯ 20 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗಿದ್ದು, 12 ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ನಂತರ ಮೊದಲಿಗೆ ಹುಡಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶಾಲಾ ಮುಖ್ಯಗುರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ನಾಯಕರ ನಡವಳಿಕೆಯಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ: ವಿಜಯೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ