ಭೀಕರ ರಸ್ತೆ ಅಪಘಾತ: ಮದುವೆಯಲ್ಲಿ ಜೊತೆಗಿದ್ದು ಸಾವಿನಲ್ಲೂ ಒಂದಾದ ಸ್ನೇಹಿತರು

Team Udayavani, Apr 20, 2022, 10:00 PM IST

ಭೀಕರ ಅಪಘಾತ :ಮದುವೆಯಲ್ಲಿ ಜೊತೆಗಿದ್ದು ಸಾವಿನಲ್ಲೂ ಒಂದಾದ ಸ್ನೇಹಿತರು

ಹುಣಸೂರು : ಹರೀನಹಳ್ಳಿಗೇಟ್ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಆರು ಮಂದಿಯೂ ಸ್ನೇಹಿತರಾಗಿದ್ದು ಇವರು ತನ್ನ ಸ್ನೇಹಿತನ ಮದುವೆ ಕಾರ್ಯಕ್ರಮದಲ್ಲಿ ಜೊತೆಗಿದ್ದು ಸಾವಿನಲ್ಲೂ ಒಂದಾದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಕೊಡಗು ಜಿಲ್ಲೆಯ ಪಾಲಿಬೆಟ್ಟದ ನಿವಾಸಿಗಳಾದ ವಾಹನ ಚಾಲಕ ಸಂತೋಷ್(47), ಎಂ.ಆರ್.ಅನಿಲ್(44), ದಯಾನಂದ್ (42), ಬಾಬು(47), ರಾಜೇಶ್(42), ವಿನೀತ(33) ಮೃತರು.

ಕೀರ್ತನ(22), ಎಂಜಲಿ(14) ಫಿಲೀಪ್(65) ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮ್ಮ ಸ್ನೇಹಿತರಾದ ಸದಾನಂದನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಿದ್ದ ಎಲ್ಲ ಸ್ನೇಹಿತರು ಬಳಿಕ ತಮ್ಮ ಊರಾದ ಕೊಡಗಿನ ವಾಪಸ್ಸಾಗುತ್ತಿದ್ದ ವೇಳೆ ಬೊಲೆರೋ ವಾಹನ ಚಾಲಕನ ನಿಯಂತ್ರಣ ಕಳೆದು ಮರಕ್ಕೆ ಡಿಕ್ಕಿ ಹೊಡೆದಿದೆ ಈ ವೇಳೆ ವಾಹನದಲ್ಲಿದ್ದ ಆರು ಮಂದಿ ಸ್ನೇಹಿತರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಲ್ಲಿ ತಮ್ಮ ಸ್ನೇಹಿತರನ್ನು ಕಳೆದುಕೊಂಡ ಇತರ ಸ್ನೇಹಿತರ ಗೋಳಾಟವಂತೂ ನೋಡತೀರದಾಗಿತ್ತು.

ಮಸಣಕ್ಕೆ ಹೊರಟ ಬಾವಿ ಮದುಮಗ : ಸಾವನ್ನಪ್ಪಿರುವವರ ಪೈಕಿ 33 ವರ್ಷದ ವಿನೀತನಿಗೆ ಇದೇ ಏ.24ರ ಭಾನುವಾರ ಪಾಲಿಬೆಟ್ಟದಲ್ಲಿ ಅಮ್ಮತ್ತಿಯ ಹುಡುಗಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆದರೆ ವಿಧಿಯೇ ಬೇರೆಯಾಗಿತ್ತು. ಸ್ನೇಹಿತರೊಂದಿಗೆ ಅಪಘಾತದಲ್ಲಿ ಮೃತಪಟ್ಟು ಮಸಣ ಸೇರಿದ್ದರೇ ಇತ್ತ ಎರಡು ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ.

ಮದುಮಗನ ಗೋಳಾಟ: ತನ್ನ ಮದುವೆಗೆ ಬಂದಿದ್ದ ಸ್ನೇಹಿತರ ಸಾವಿನಿಂದ ಕಂಗಾಲಾಗಿದ್ದ ಮದುಮಗ ಪಾಲಿಬೆಟ್ಟದ ಸದಾನಂದ ಹಾಗೂ ಅವರ ಕುಟುಂಬದವರು ನಮ್ಮ ಮದುವೆಗೆ ಬಂದವರಿಗೆ ಈ ರೀತಿ ಸಾವು ಬಂತ್ತಲ್ಲಾ ಎಂದು ಗೋಳಾಡುತ್ತಿದ್ದುದ್ದು ಅಪಘಾತದ ಸ್ಥಳದಲ್ಲಿ ಕಂಡುಬಂತು.

ಇದನ್ನೂ ಓದಿ :ಪಿಎಸ್‌ಐ ನೇಮಕಾತಿ ಅಕ್ರಮ: ಗೃಹ ಸಚಿವರು ಉತ್ತರಿಸಲಿ: ದಿನೇಶ್‌ ಗುಂಡೂರಾವ್‌ ಆಗ್ರಹ

ಮುಗಿಲು ಮುಟ್ಟಿದ ಆಕ್ರಂದನ : ಅಪಘಾತದ ವಿಷಯ ತಿಳಿದು ಪಾಲಿಬೆಟ್ಟದಿಂದ ಆಗಮಿಸಿದ ನೆಂಟರಿಷ್ಟರು, ಸ್ನೇಹಿತರು ಹಾಗೂ ಮದುವೆಗೆ ಬಂದಿದ್ದ ನೂರಾರು ಮಂದಿ ಅಪಘಾತದ ಸ್ಥಳ ಹಾಗೂ ಶವಗಾರದ ಬಳಿ ಜಮಾಯಿಸಿ ತಮ್ಮೂರಿನ ಯುವಕರನ್ನು ಕಳೆದುಕೊಂಡ ನೋವಿನ ಅಕ್ರಂದನ ಮುಗಿಲುಮುಟ್ಟಿತ್ತು. ಬಹುತೇಕರು ಮಲೆಯಾಳ ಭಾಷೆಯಲ್ಲಿಯೇ ತಮ್ಮ ನೋವು ತೋಡಿಕೊಳ್ಳುತ್ತಿದ್ದುದು, ಒಬ್ಬರನ್ನೊಬ್ಬರು ತಬ್ಬಿಕೊಂಡು ಗೋಳಾಡುತ್ತಿದ್ದುದನ್ನು ನೋಡಿ ನೆರೆದಿದ್ದವರ ಮನಕಲಕುವಂತಾಗಿತ್ತು. ಇನ್ನು ಪೊಲೀಸರು ಸಹ ಅಪಘಾತದ ದೃಶ್ಯವನ್ನು ಕಂಡು ಮರಗುತ್ತಿದ್ದರಲ್ಲದೇ ಅವರ ಮೃತರ ಸಂಬಂಧಿಕರನ್ನು ಸಂತೈಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.