ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ
ಸ್ಪಷ್ಟನೆ ನೀಡಲು ಎಚ್‌ಡಿಕೆಗೆ ಗೋಕರ್ಣ ಮಹಾಬಲೇಶ್ವರ ದೇಗುಲ ಅರ್ಚಕರ ಪಟ್ಟು
Team Udayavani, Feb 8, 2023, 9:56 PM IST
ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ.
ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ಅರ್ಚಕರು ನಿಮ್ಮ ಹೇಳಿಕೆಯಿಂದ ಬೇಸರವಾಗಿದ್ದು ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಗೋಕರ್ಣದಲ್ಲೇ ನೀವು ಸ್ಪಷ್ಟೀಕರಣ ನೀಡಬೇಕು ಎಂದು ಕೇಳಿದರು. ಆಗ ಮಾತನಾಡಿದ ಕುಮಾರಸ್ವಾಮಿ, ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಹಿಂದೂ ಹೆಸರಲ್ಲಿ ಅಧಿಕಾರಕ್ಕೆ ಬಂದು ಈಗ ಅ ಧಿಕಾರದಲ್ಲಿ ಇರೋರು ಏನು ಮಾಡಿದ್ದಾರೆ ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನೂ ಮಾಡಿಲ್ಲ. ನಮಗೆ ಸಾವರ್ಕರ್ ಸಂಸ್ಕೃತಿ ಬೇಡ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ಬೇಕು ಎಂದರು.
ಪೂಜೆ ವೇಳೆ ಮಹಾಗಣಪತಿ ಪ್ರಸಾದ: ಕುಮಾರಸ್ವಾಮಿ ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ವೇಳೆ ಮಹಾಗಣಪತಿ ತಲೆ ಮೇಲಿನಿಂದ ಹೂವು ಬಿದ್ದು ಪ್ರಸಾದವಾಗಿದೆ. ಬಳಿಕ ಕುಮಾರಸ್ವಾಮಿ ಕೈಮುಗಿದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದಲ್ಲಿರುವ ಆತ್ಮಲಿಂಗಕ್ಕೆ ಅರ್ಚಕರ ತಂಡದ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕಟೀಲು ಪಿಟೀಲು ಎಂದು ಹೆಸರು ಬದಲಿಸಿಕೊಳ್ಳಲಿ
ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ನಳಿನಕುಮಾರ್ ಕಟೀಲ್‌ಗೆ ಸರಿಯಾಗಿ ರಾಜಕೀಯ ಗೊತ್ತಿಲ್ಲ. ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಲು ಹೋಗಿ, ದೇವೇಗೌಡರು ಬಂಗಾರಪ್ಪ ಮನೆಯಿಂದ ಜುಬ್ಟಾ ಹರಿಸಿಕೊಂಡು ಬಂದಿದ್ದರು. ಹೊಡೆಯುವುದು ಎಲ್ಲಿಂದ ಬಂತು? ಈ ಬಗ್ಗೆ ಗೊತ್ತಿಲ್ಲದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಎಂದು ಹೆಸರಿಟ್ಟುಕೊಳ್ಳುವ ಬದಲು ಪಿಟೀಲು ಎಂದು ಇಟ್ಟುಕೊಳ್ಳಲಿ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್
ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ
ಮಾಸ್ ಲುಕ್ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್ ರಾಜ್
ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ
ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ