ವೈದ್ಯರ ಸೇವೆ ಸಿಗದೆ ಗರ್ಭಿಣಿ ಅಸುನೀಗಿದರೆ ಸರಕಾರದಿಂದಲೇ ಪರಿಹಾರ

ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

Team Udayavani, Nov 20, 2019, 8:00 AM IST

ಬೆಂಗಳೂರು: ಸರಕಾರಿ ಆಸ್ಪತ್ರೆ ಗಳಲ್ಲಿ ವೈದ್ಯರು ಲಭ್ಯರಿಲ್ಲದೆ ಗರ್ಭಿಣಿಯರು ಸಾವನ್ನಪ್ಪಿದರೆ ಅವರ ಕುಟುಂಬಗಳಿಗೆ ಸರ ಕಾರವೇ ಪರಿಹಾರ ನೀಡಬೇಕಾಗುತ್ತದೆ ಎಂದು ಹೈಕೋರ್ಟ್‌ ಸೂಚನೆ ನೀಡಿದೆ.

ತೀವ್ರವಾದ ಅಪೌಷ್ಟಿಕತೆಯಿಂದ ಗರ್ಭಿಣಿ ಯರು ಹಾಗೂ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿ ಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಒಕ್‌ ಹಾಗೂ ನ್ಯಾ| ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು, ಮಕ್ಕಳ ವೈದ್ಯರು ಸಹಿತ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬಂದಿಯ ಕೊರತೆ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಒಂದು ವೇಳೆ ವೈದ್ಯರು ಲಭ್ಯರಿಲ್ಲದೆ ಗರ್ಭಿಣಿಯರು ಸಾವನ್ನಪ್ಪಿದರೆ, ಅವರ ಕುಟುಂಬದವರು ಪರಿಹಾರ ಕೇಳುವು ದರಲ್ಲಿ ತಪ್ಪೇನಿಲ್ಲ. ಸರಕಾರ ಪರಿಹಾರ ನೀಡಬೇಕಾಗುತ್ತದೆ ಎಂದಿತು. ಈ ಸಂಬಂಧ ಮುಂದಿನ ಮಂಗಳ ವಾರ ಆದೇಶ ಹೊರಡಿಸುವುದಾಗಿ ಹೇಳಿ ವಿಚಾರಣೆಯನ್ನು ಮುಂದೂಡಿತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ