
ಎಫ್ಐಆರ್ ವೆಬ್‌ಸೈಟ್‌ಗೆ ಹಾಕಿದರೆ ಸಾಕ್ಷ್ಯನಾಶ ಸಾಧ್ಯತೆ: ಲೋಕಾಯುಕ್ತ
Team Udayavani, Dec 2, 2022, 7:50 AM IST

ಬೆಂಗಳೂರು: “ಸೂಕ್ಷ್ಮ ಪ್ರಕರಣಗಳ ಎಫ್ಐಆರ್ ಅನ್ನು ತಕ್ಷಣವೇ ವೆಬ್‌ಸೈಟ್‌ಗೆ ಹಾಕಿದರೆ ಸಾಕ್ಷ್ಯನಾಶಪಡಿಸುವ ಸಾಧ್ಯತೆ ಇರುತ್ತದೆ’ ಎಂದು ಲೋಕಾಯುಕ್ತ ಸಂಸ್ಥೆ ಹೈಕೋರ್ಟ್‌ಗೆ ಹೇಳಿದೆ.
ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಲೋಕಾಯುಕ್ತ ಸಂಸ್ಥೆ ಈ ಮಾಹಿತಿ ನೀಡಿದೆ.
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿ, ಕೆಲವು ಸೂಕ್ಷ್ಮ ಪ್ರಕರಣದಲ್ಲಿ ಎಫ್ಐಆರ್ ಅನ್ನು ವೆಬ್‌ಸೈಟ್‌ನಲ್ಲಿ ಹಾಕಿದರೆ, ಅದರ ಮಾಹಿತಿ ಆರೋಪಿಗೆ ಸಿಗುವ ಮತ್ತು ಅದರಿಂದ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇರುತ್ತದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಧ್ಯೇಯೋದ್ದೇಶವನ್ನೇ ವಿಫಲಗೊಳಿಸುತ್ತದೆ. ಹಾಗಾಗಿ, ಸಮಾಜ ಮತ್ತು ಆರೋಪಿಗಳ ಹಕ್ಕುಗಳ ವಿಚಾರದಲ್ಲಿ ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ಸೂಕ್ಷ್ಮ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಅನ್ನು ವಿಳಂಬವಾಗಿ ವೆಬ್‌ಸೈಟ್‌ಗೆ ಹಾಕಲಾಗುತ್ತದೆ. ಇದನ್ನು ಹೊರತುಪಡಿಸಿ ಇತರೆ ಪ್ರಕರಣಗಳ ಎಫ್ಐಆರ್ ಅನ್ನು ಸುಪ್ರಿಂಕೋರ್ಟ್ ಆದೇಶದಂತೆ ದಾಖಲಿಸಿದ 24 ಗಂಟೆಯೊಳಗೆ ವೆಬ್‌ಸೈಟ್‌ಗೆ ಹಾಕಲಾಗುತ್ತದೆ ಎಂದು ತಿಳಿಸಿದರು.
ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಲೋಕಾಯುಕ್ತ ಸಹ ಕೆಲವೊಂದು ಪ್ರಕರಣಗಳಲ್ಲಿ ಗೌಪ್ಯತೆ ಕಾಯ್ದುಕೊಳ್ಳಬೇಕಾಗುತ್ತದೆ. ಲೋಕಾಯುಕ್ತರು ಪ್ರಮಾಣ ಸಲ್ಲಿಸುವುದರಿಂದ ಅರ್ಜಿಯಲ್ಲಿ ಎತ್ತಲಾಗಿರುವ ಅಂಶಗಳು ಅಸ್ತಿತ್ವ ಕಳೆದುಕೊಳ್ಳಲಿವೆ ಎಂಬುದಾಗಿ ಅರ್ಜಿದಾರರು ತಿಳಿಸಿದ್ದಾರೆ. ಹಾಗೆಯೇ, ಅರ್ಜಿಯಲ್ಲಿ ಎತ್ತಲಾಗಿರುವ ಆಕ್ಷೇಪಗಳಿಗೆ ಪರಿಹಾರವೂ ದೊರೆತಿದೆ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿಯಲ್ಲಿ ಏನಿತ್ತು?: ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು. ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಆದ್ದರಿಂದ ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಆಸೀಸ್ ವಿರುದ್ಧದ ಮೊದಲ ಟೆಸ್ಟ್ ನಿಂದ ಹೊರಬಿದ್ದ ಸ್ಟಾರ್ ಬ್ಯಾಟರ್: ಸೂರ್ಯಗೆ ಅವಕಾಶ ಸಾಧ್ಯತೆ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ

ಕೇಂದ್ರ ಬಜೆಟ್ 2023:ಸಿಹಿ ಸುದ್ದಿ-ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ 79ಸಾವಿರ ಕೋಟಿ ಅನುದಾನ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್