ಅಕ್ರಮ ಹಣಕಾಸು ವರ್ಗಾವಣೆ ಕೇಸ್; DK ಶಿವಕುಮಾರ್ ಜಾಮೀನು ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Oct 17, 2019, 6:54 PM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ ದೆಹಲಿ ಹೈಕೋರ್ಟ್ ಗುರುವಾರ ತೀರ್ಪನ್ನು ಕಾಯ್ದಿರಿಸಿದೆ.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಡಿಕೆ ಶಿವಕುಮಾರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದಿಸಿದ್ದರು. ಜಾರಿ ನಿರ್ದೇಶನಾಲಯದ ಪರವಾಗಿ ನಟರಾಜ್ ಅವರು ಪ್ರತಿವಾದ ಮಂಡಿಸಿ, ಡಿಕೆ ಶಿವಕುಮಾರ್ ಪ್ರಭಾವಿಯಾಗಿದ್ದು ಜಾಮೀನು ಮಂಜೂರು ಮಾಡಬಾರದು. ಈಗಾಗಲೇ ಕೇಂದ್ರ ಮಾಜಿ ಸಚಿವ ಚಿದಂಬರಂ ಅವರಿಗೂ ಜಾಮೀನು ನಿರಾಕರಿಸಲಾಗಿದೆ ಎಂದು ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ