ಭಾರತ-ಲಂಕಾ ಕ್ರಿಕೆಟ್ ಸರಣಿ ಜು. 18ರಿಂದ ಆರಂಭ: ಬಿಸಿಸಿಐ
Team Udayavani, Jul 11, 2021, 12:17 AM IST
ಹೊಸದಿಲ್ಲಿ/ಕೊಲಂಬೊ: ಭಾರತ-ಶ್ರೀಲಂಕಾ ನಡುವಿನ ಸೀಮಿತ ಓವರ್ಗಳ ಸರಣಿ ಜು. 18ರಂದು ಆರಂಭವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಎರಡು ಕೋವಿಡ್ ಕೇಸ್ ಕಂಡುಬಂದ ಕಾರಣ ಈ ಬದಲಾವಣೆ ಮಾಡಲಾಗಿದೆ.
ಮೂಲ ವೇಳಾಪಟ್ಟಿಯಂತೆ ಜು. 13ರಂದು ಏಕದಿನ ಪಂದ್ಯದೊಂದಿಗೆ ಸರಣಿ ಆರಂಭವಾಗಬೇಕಿತ್ತು. ಆದರೆ ಇಂಗ್ಲೆಂಡ್ನಿಂದ ಮರಳಿದ ಬಳಿಕ ಲಂಕಾ ತಂಡದ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ ಮತ್ತು ಡಾಟಾ ವಿಶ್ಲೇಷಕ ಜಿ.ಟಿ. ನಿರೋಷನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಕಾರಣ ಸರಣಿಯನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡುವ ತೀರ್ಮಾನಕ್ಕೆ ಬರಲಾಯಿತು.
ಜು. 17ಕ್ಕೆ ಸರಣಿ ಆರಂಭವಾಗಲಿದೆ ಎಂದು ಶುಕ್ರವಾರ ರಾತ್ರಿ ವರದಿ ಯಾಗಿತ್ತು. ಆದರೆ ಇದು ಜು. 18ಕ್ಕೆ ಮೊದಲ್ಗೊಳ್ಳಲಿದೆ ಎಂದು ಜಯ್ ಶಾ ಸ್ಪಷ್ಟಪಡಿಸಿದರು.
ಪರಿಷ್ಕೃತ ವೇಳಾಪಟ್ಟಿಯಂತೆ ಏಕದಿನ ಪಂದ್ಯಗಳು ಜು. 18, 20 ಮತ್ತು 23ರಂದು ನಡೆಯಲಿವೆ. ಟಿ20 ಪಂದ್ಯಗಳನ್ನು ಜು. 25, 27 ಮತ್ತು 29ರಂದು ಆಡಲಾಗುವುದು. ಎಲ್ಲ ಪಂದ್ಯಗಳು ಕೊಲಂಬೊದ “ಆರ್. ಪ್ರೇಮದಾಸ ಸ್ಟೇಡಿಯಂ’ನಲ್ಲಿ ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!