ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಮತ್ತೆ ಆರಂಭ
Team Udayavani, Mar 27, 2022, 10:15 PM IST
ನವದೆಹಲಿ : ಸೋಂಕಿನ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ರದ್ದಾಗಿದ್ದ ಅಂತಾರಾಷ್ಟ್ರೀಯ ವಿಮಾನಯಾನ ಭಾನುವಾರದಿಂದ ಶುರುವಾಗಿದೆ.
ಮಾ.27ರಿಂದ ಅ.29ರ ವರೆಗೆ ವೈಮಾನಿಕ ಕ್ಷೇತ್ರದ ಬೇಸಗೆ ಲೆಕ್ಕಾಚಾರದ ಪ್ರಕಾರ ವಿದೇಶಿ ವಿಮಾನಯಾನ ಕಂಪನಿಗಳು ವಾರಕ್ಕೆ 1,783 ಹಾರಾಟಗಳನ್ನು, ದೇಶೀಯ ವಿಮಾನ ಕಂಪನಿಗಳು 1, 466 ಹಾರಾಟಗಳನ್ನು ನಡೆಸಲಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ವಿಮಾನಯಾನ ಶುರುವಾಗಿರುವುದರಿಂದ ಭಾರತವನ್ನು ಜಗತ್ತಿನ ಇತರ ಭಾಗಗಳಿಗೆ ಮತ್ತೂಮ್ಮೆ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಾಹಿತಿ ಪ್ರಕಾರ ದೇಶದ ಆರು ವಿಮಾನಯಾನ ಸಂಸ್ಥೆಗಳು ಮತ್ತು 60 ವಿದೇಶಿ ವಿಮಾನಯಾನ ಸಂಸ್ಥೆಗಳು 63 ದೇಶಗಳಿಗೆ ವಿಮಾನಯಾನ ಶುರು ಮಾಡಿವೆ.
ಇದನ್ನೂ ಓದಿ : ಹಿಜಾಬ್ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ