ಹಿಜಾಬ್‌ ಪ್ರಕರಣದ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಾಗಲಿ: ಬಿ.ಸಿ. ನಾಗೇಶ್‌


Team Udayavani, Feb 8, 2022, 9:30 PM IST

ಹಿಜಾಬ್‌ ಪ್ರಕರಣದ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಾಗಲಿ: ಬಿ.ಸಿ. ನಾಗೇಶ್‌

ಬೆಂಗಳೂರು: ಹಿಜಾಬ್‌ ಪ್ರಕರಣದ ಹಿಂದಿರುವ ಶಕ್ತಿಗಳ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 5 ಸಾವಿರ ಕಾಲೇಜುಗಳಲ್ಲಿ ಕೇವಲ 12 ಕಾಲೇಜುಗಳಲ್ಲಿ ಮಾತ್ರ ಈ ರೀತಿಯ ಗಲಾಟೆ ಆಗಿದೆ. ಸರ್ಕಾರ ಎಲ್ಲ ಕಡೆಯೂ ಕ್ರಮ ಕೈಗೊಂಡಿದೆ. ಕೆಲವು ವಿದ್ಯಾರ್ಥಿಗಳು ಕೇವಲ ಹಿಜಾಬ್‌ಗ ಅವಕಾಶ ಕೇಳುತ್ತಿಲ್ಲ. ಐದು ಬಾರಿ ನಮಾಜ್‌ ಮಾಡಲೂ ಅವಕಾಶ ಕೇಳುತ್ತಿದ್ದಾರೆ. ಸರ್ಕಾರ ಯಾವ ಬೇಡಿಕೆಯನ್ನೂ ಒಪ್ಪಿಕೊಂಡಿಲ್ಲ ಎಂದರು.

ರಾಜ್ಯ ಸರ್ಕಾರ ಇದರಿಂದ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಹಾಗೆ ಮಾಡುವುದಾಗಿದ್ದರೆ, ಒಂದು ತಿಂಗಳು ಉಡುಪಿಯ ಕಾಲೇಜಿನಲ್ಲಿ ನಡೆಯುತ್ತಿದ್ದ ಘಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರಲಿಲ್ಲ. ಕೆಲವು ರಾಜಕೀಯ ನಾಯಕರು ಈ ಘಟನೆಗೆ ತುಪ್ಪ ಸುರಿದು ಶಕ್ತಿ ತುಂಬಿದರು.
ಅದರಿಂದ ಎಲ್ಲ ಕಡೆಗೆ ಹರಡುವಂತಾಯಿತು. ಪಾಕಿಸ್ತಾನದ ಪರ ಎಂದು ಪ್ರಚೋದನಾತ್ಮಕ ವಿಚಾರ ಯಾರೂ ಹೇಳ ಬಾರದು. ಜೊತೆಗೆ ಇಂಥದ್ದು ಸಂವಿಧಾನದಲ್ಲಿ ಇದೆ ಎನ್ನುವುದನ್ನೂ ಕೂಡ ಯಾರೂ ಹೇಳಬಾರದು. ಈ ಘಟನೆಯ ಹಿಂದೆ ಎಸ್‌.ಡಿ.ಪಿ ಐ ಸಂಘಟನೆ ಇದರ ಹಿಂದೆ ಕೆಲಸ ಮಾಡಿದೆ ಎನ್ನೋದು ಕೆಲ ವರದಿಯಿಂದ ತಿಳಿದಿದೆ.

ಆದರೆ, ಇದರ ಬಗ್ಗೆ ತನಿಖೆ ಆಗಬೇಕು. ಇದರ ಹಿಂದೆ ಯಾರು ಯಾರಿದ್ದಾರೆ ಎನ್ನೋ ಬಗ್ಗೆ ತನಿಖೆ ಆಗಲಿ. ತನಿಖೆ ಆಗಬೇಕು ಎನ್ನುವ ಹಂತದಲ್ಲಿದೆ, ಆದೇಶ ಆಗಿಲ್ಲ ಎಂದು ಹೇಳಿದರು.

ಇನ್ನು ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದ್ದರೆ ಅದು ಖಂಡನೀಯ. ಅಲ್ಲಿಂದ ಅಧಿಕಾರಿಗಳ ವರದಿ ತರಿಸಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ಇಂಥ ಘಟನೆಗಳಿಂದ ಮಕ್ಕಳು ಖಂಡಿತ ಆತಂಕ್ಕೊಳಗಾಗುತ್ತಾರೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.