
ಹಿಜಾಬ್ ಸರಿಯಾಗಿ ಧರಿಸಿಲ್ಲ ಎಂದು ಬಂಧನಕ್ಕೊಳಗಾಗಿದ್ದ ಇರಾನ್ ಯುವತಿ ಸಾವು
ಬಂಧನದ ನಂತರ ಕೋಮಾ ಸ್ಥಿತಿ ತಲುಪಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Team Udayavani, Sep 17, 2022, 4:38 PM IST

ಟೆಹ್ರಾನ್: ಹಿಜಾಬ್ ಅನ್ನು ಸಮರ್ಪಕವಾಗಿ ಹಾಕಿಕೊಂಡಿಲ್ಲ ಎಂದು 22 ವರ್ಷದ ಯುವತಿಯನ್ನು ನೈತಿಕ ಪೊಲೀಸರು (Morality police) ಬಂಧಿಸಿ, ಹಿಗ್ಗಾಮುಗ್ಗಾ ಥಳಿಸಿದ್ದರು. ಇದರ ಪರಿಣಾಮ ಕೋಮಾಕ್ಕೆ ಜಾರಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಇರಾನ್ ನಲ್ಲಿ ನಡೆದಿರುವುದಾಗಿ ಫಾರ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇದನ್ನೂ ಓದಿ:ಯಲ್ಲಾಪುರ: ಕಂದಕಕ್ಕೆ ಉರುಳಿ ಬಿದ್ದು ನುಜ್ಜುಗುಜ್ಜಾದ ಲಾರಿ: ಇಬ್ಬರು ಸಾವು
ಇರಾನ್ ನಲ್ಲಿ Morality police ಪೊಲೀಸ್ ಇಲಾಖೆಯ ಒಂದು ಭಾಗವಾಗಿದೆ. ಇವರು ಷರಿಯಾ ಪ್ರಕಾರ ಧಾರ್ಮಿಕ ನಿಯಮ ಪಾಲಿಸದವರನ್ನು ಗಮನಿಸಿ ಬಂಧಿಸುವುದು ನೈತಿಕ ಪೊಲೀಸರ ಕಾರ್ಯವಾಗಿದೆ.
ಮಹ್ಸಾ ಅಮಿನಿ(22ವರ್ಷ) ಕಳೆದ ವಾರ ಇರಾನ್ ನ ಕುರ್ದಿಸ್ತಾನ್ ಪ್ರಾಂತ್ಯದಿಂದ ತನ್ನ ಸಂಬಂಧಿಕರನ್ನು ಭೇಟಿಯಾಗಲು ರಾಜಧಾನಿ ಟೆಹ್ರಾನ್ ಗೆ ತೆರಳಿದ್ದಳು. ಈ ಸಂದರ್ಭದಲ್ಲಿ ಮಹ್ಸಾ ಹಿಜಾಬ್ ಅನ್ನು ಸಮರ್ಪಕವಾಗಿ ಧರಿಸಿಲ್ಲ ಎಂದು ಆರೋಪಿಸಿ ಇರಾನ್ ನೈತಿಕ ಪೊಲೀಸರು ಬಂಧಿಸಿದ್ದರು.
ಬಂಧನದ ನಂತರ ಕೋಮಾ ಸ್ಥಿತಿ ತಲುಪಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇರಾನ್ ಪೊಲೀಸರ ಹೇಳಿಕೆ ಪ್ರಕಾರ, ಆಕೆಯನ್ನು ಬಂಧಿಸಿದ ವೇಳೆ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾದ ಹೇಳಿಕೆ, ಅಮಿನಿಯನ್ನು ಪೊಲೀಸರು ಹೊಡೆದು ಹತ್ಯೆಗೈದಿರುವುದಾಗಿ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.
1979ರ ಇರಾನ್ ನಲ್ಲಿ ನಡೆದ ಕ್ರಾಂತಿಯ ನಂತರ ಮಹಿಳೆಯರು ಹಿಜಾಬ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಅಷ್ಟೇ ಅಲ್ಲ ಧರ್ಮದ ಹೆಸರಿನಲ್ಲಿ ಆಡಳಿತ ನಡೆಸುವ ಆಡಳಿತಗಾರರ ಕಠಿಣ ಎಚ್ಚರಿಕೆ ಎಂದೇ ಭಾವಿಸಲಾಗಿದೆ. ಒಂದು ವೇಳೆ ಮಹಿಳೆಯರು ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದಲ್ಲಿ ಇರಾನ್ ನ ನೈತಿಕ ಪೊಲೀಸರು ಕಿರುಕುಳ ನೀಡುವುದು, ಬಂಧಿಸುವುದು ಕಡ್ಡಾಯವಾಗಿತ್ತು ಎಂದು ವರದಿ ವಿವರಿಸಿದೆ.
ಇರಾನ್ ನಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ತಲೆಕೂದಲನ್ನು ಪೂರ್ಣಪ್ರಮಾಣದಲ್ಲಿ ಮುಚ್ಚುವಂತೆ ಹಿಜಾಬ್ ಧರಿಸಬೇಕು ಹಾಗೂ ಉದ್ದನೆಯ ಬಟ್ಟೆ ಧರಿಸುವುದು ಕಡ್ಡಾಯವಾಗಿರುವುದಾಗಿ ವರದಿ ತಿಳಿಸಿದೆ.
ಹಿಜಾಬ್ ಸಮರ್ಪಕವಾಗಿ ಧರಿಸಿಲ್ಲ ಎಂದು ಅಮಿನಿಯನ್ನು ಥಳಿಸಿ, ಸಾವಿಗೀಡಾಗುವಂತೆ ಮಾಡಿರುವ ಪ್ರಕರಣದ ಬಗ್ಗೆ ಇರಾನ್ ನಲ್ಲಿ ಸಾಮಾಜಿ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್