ಗ್ರೂಪ್ ಬಿ, ಸಿ ಹುದ್ದೆಗಳಿಗೆ ಇನ್ನು ಒಂದೇ ಸಿಇಟಿ?
Team Udayavani, Dec 4, 2019, 6:15 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಹಲವಾರು ಅರ್ಹತಾ ಪರೀಕ್ಷೆಗಳನ್ನು ನಡೆಸುವುದನ್ನು ಕೈಬಿಟ್ಟು, ಆ ಎಲ್ಲ ಹುದ್ದೆಗಳಿಗೂ ಒಂದೇ ಸಿಇಟಿ (ಸಾಮಾನ್ಯ ಅರ್ಹತಾ ಪರೀಕ್ಷೆ) ನಡೆಸುವ ಮಹತ್ವದ ಪ್ರಸ್ತಾವನೆಯೊಂದನ್ನು ಕೇಂದ್ರ ಸಿಬಂದಿ ಸಚಿವಾಲಯ ರೂಪಿಸಿದೆ.
ಕೇಂದ್ರ ಸರಕಾರದ ಅಧೀನದಲ್ಲಿರುವ “ಸಿಬಂದಿ ಆಯ್ಕೆ ಆಯೋಗ’ (ಎಸ್‌ಎಸ್‌ಸಿ) ಕೇಂದ್ರ ಸರಕಾರದ ವಿವಿಧ ಇಲಾಖೆಗಳ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗಾಗಿ ಹಲವಾರು ಪರೀಕ್ಷೆಗಳನ್ನು ನಡೆಸಿ ಆಯಾ ಇಲಾಖೆಗೆ ಬೇಕಾದ ಅಭ್ಯರ್ಥಿಗಳನ್ನು ಪ್ರತ್ಯೇಕ ವಾಗಿ ಆಯ್ಕೆ ಮಾಡುತ್ತಿದೆ. ಆ ಎಲ್ಲ ಪರೀಕ್ಷೆಗಳನ್ನು ಕೈಬಿಟ್ಟು, ಗ್ರೂಪ್ ಬಿ (ಪತ್ರಾಂಕಿತಯೇತರ) ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಒಂದೇ ಸಿಇಟಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಹಾಗೂ ಆ ಸಿಇಟಿ ಹೊಣೆಯನ್ನು ಹೊಸದಾಗಿ ಸ್ಥಾಪಿಸಲಾಗುವ ವಿಶೇಷ ಪ್ರಾಧಿಕಾರಕ್ಕೆ ನೀಡಬೇಕು ಎಂಬುದು ಪ್ರಸ್ತಾವನೆಯ ಮೂಲ ತಿರುಳು.
ಉಪಯೋಗಗಳೇನು?
– ಒಂದೇ ಸಿಇಟಿಯಿಂದ ಪ್ರತಿ ಇಲಾಖೆಗೂ ಪ್ರತ್ಯೇಕ ಪರೀಕ್ಷೆ ನಡೆಸುವ ಕಿರಿಕಿರಿಯಿಂದ ಮುಕ್ತಿ.
– ಹಲವು ಪರೀಕ್ಷೆಗಳ ಬದಲು ಒಂದೇ ಪರೀಕ್ಷೆ ಜಾರಿಯಾದರೆ ಖರ್ಚಿಗೆ ಕಡಿವಾಣ.
– ಒಂದು ಪರೀಕ್ಷೆಗೆ ಮಾತ್ರ ಸಿದ್ಧತೆ ಬೇಕಿರುವುದರಿಂದ ಅಭ್ಯರ್ಥಿಗಳೂ ನಿರಾಳ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ