ಜೈ ಜವಾನ್‌, ಜೈ ಕಿಸಾನ್‌ ಜತೆ “ಜೈ ಅನ್ವೇಷಕ’ವೂ ಸೇರಲಿ: ಡಾ.ಅಶ್ವತ್ಥ ನಾರಾಯಣ

Team Udayavani, Mar 10, 2020, 11:05 PM IST

ಜೈ ಜವಾನ್‌, ಜೈ ಕಿಸಾನ್‌ ಜತೆ “ಜೈ ಅನ್ವೇಷಕ’ವೂ ಸೇರಲಿ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ಭವಿಷ್ಯದಲ್ಲಿ ಭಾರತ ವಿಶ್ವ ಮಟ್ಟದಲ್ಲಿಯೇ ಮಾದರಿ ದೇಶವಾಗಲಿದ್ದು, ಇದಕ್ಕೆ ಉದ್ಯಮಿಗಳ ಪಾತ್ರ ಮಹತ್ವವಾಗಿದೆ. ಮುಂದಿನ ದಿನಗಳಲ್ಲಿ ಜೈ ಜವಾನ್‌, ಜೈ ಕಿಸಾನ್‌ ಜತೆ “ಜೈ ಅನ್ವೇಷಕ’ವೂ ಸೇರಬೇಕು ಎಂದು ಉಪಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥ ನಾರಾಯಣ ತಿಳಿಸಿದರು.
ಮಾಹಿತಿ ತಂತ್ರಜ್ಞಾನ ಇಲಾಖೆ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಎಲಿವೇಟ್‌ ಕಾಲ್‌ -2, ಉನ್ನತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅನ್ವೇಷಕರು ಭರವಸೆ ಮೂಡಿಸುತ್ತಿದ್ದು, ಪ್ರತಿಭಾನ್ವಿತರು ಹೊರಹೊಮ್ಮುತ್ತಿದ್ದಾರೆ. ಪ್ರತಿಭಾನ್ವಿತರ ಪ್ರಯತ್ನಕ್ಕೆ ಸರ್ಕಾರದ ಬೆಂಬಲ ಇದೆ ಎಂದು ತಿಳಿಸಿದರು.

ನಾಡಿನಲ್ಲಿರುವ ಪ್ರತಿಭಾನ್ವಿತರನ್ನು ಗುರುತಿಸಿ ಬೆಂಬಲಿಸಲು “ಗ್ರಾಂಟ್‌ ಇನ್‌ ನೀಡ್‌’ ಕಾರ್ಯಕ್ರಮ ರೂಪಿಸಲಾಗಿದೆ. ಅದಕ್ಕಾಗಿಯೇ ಬಜೆಟ್‌ನಲ್ಲಿ ಇನ್ನೋವೇಷನ್‌ ಹಬ್‌ ಸ್ಥಾಪನೆ ಪ್ರಸ್ತಾಪ ಮಾಡಲಾಗಿದೆ ಎಂದರು.

ಈಸ್‌ ಆಫ್ ಡೂಯಿಂಗ್‌ ಬಿಸಿನೆಸ್‌ (ಸುಲಲಿತ ವ್ಯವಹಾರ) ಪರಿಣಾಮಕಾರಿ ಜಾರಿ ಮೂಲಕ ನಂ. 1 ಸ್ಥಾನದಲ್ಲಿರುವುದು ಕರ್ನಾಟಕದ ಉದ್ದೇಶವಾಗಿದೆ. ಉದ್ದಿಮೆಗೆ ಯಾವುದೇ ರೀತಿಯ ಅಡಚಣೆ ಇಲ್ಲದೇ ಸಂತೋಷದಿಂದ ಕೆಲಸ ಮಾಡುವ ವ್ಯವಸ್ಥೆ ನಿರ್ಮಾಣ ಮಾಡಿ, ವಿಶ್ವದÇÉೇ ಕರ್ನಾಟಕ ಉದ್ಯಮಿ ಮತ್ತು ಉದ್ಯಮ ಸ್ನೇಹಿ ಸ್ಥಳ ಆಗಿರಬೇಕು ಎಂದು ಪಣ ತೊಟ್ಟು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಉತ್ತರ ಅಮೆರಿಕ, ಯೂರೋಪ್‌ಗ್ಳ ಗಮನ ಸೆಳೆಯುವಲ್ಲಿ ಬೆಂಗಳೂರು ಯಶಸ್ವಿಯಾಗಿದೆ. ಆದರೆ, ದಕ್ಷಿಣ ಏಷ್ಯಾ ರಾಷ್ಟ್ರಗಳಿಗೆ ನಮ್ಮ ಬೆಂಗಳೂರಿನ ಸಾಮರ್ಥ್ಯ ಗೊತ್ತಿಲ್ಲ. ಏಷ್ಯಾದ ಇತರೆ ರಾಷ್ಟ್ರಗಳಿಗೆ ಬೆಂಗಳೂರಿನ ಸಾಮರ್ಥ್ಯ ತಿಳಿಸಿಕೊಡುವ ಪ್ರಯತ್ನಗಳು ಆಗಬೇಕು. ಹೊರಗಿನಿಂದ ಬಂದವರೂ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆಸಕ್ತಿ ತೋರುವುದನ್ನು ಕಂಡಾಗ ಬಹಳ ಸಂತೋಷವಾಗುತ್ತದೆ. ಬೆಂಗಳೂರಿನ ಅಭಿವೃದ್ಧಿಗೆ ಅವರ ನಿಸ್ವಾರ್ಥ ಸೇವೆ ದೊಡ್ಡದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಎಲಿವೇಟ್‌ ಕರ್ನಾಟಕದ ನಿರ್ದೇಶಕ ಪ್ರಶಾಂತ್‌ ಮಿಶ್ರಾ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಕುಮಾರ್‌ ನಾಯಕ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

113 ಸ್ಟಾರ್ಟ್‌ಅಪ್‌ಗ್ಳ ವಿಜೇತರ ಘೋಷಣೆ
ನಾವೀನ್ಯತೆಯುಳ್ಳ ವಾಣಿಜ್ಯೋದ್ಯಮಿಗಳಿಗೆ 50 ಲಕ್ಷ ರೂ. ವರೆಗೆ ಅನುದಾನ ನೀಡುವುದೇ ಎಲಿವೇಟ್‌, ಉನ್ನತಿ ಕಾರ್ಯಕ್ರಮವಾಗಿದ್ದು, 113 ಸ್ಟಾರ್ಟ್‌ಅಪ್‌ಗ್ಳ ವಿಜೇತರನ್ನು ಘೋಷಿಸಲಾಯಿತು. ಬೆಂಗಳೂರಿನ 78, ಧಾರವಾಡದ 13, ಬೆಳಗಾವಿ 4, ಕಲಬುರಗಿ ಮತ್ತು ತುಮಕೂರಿನಿಂದ ತಲಾ 3, ಬೀದರ್‌, ಬೆಂಗಳೂರು ಗ್ರಾಮೀಣ, ಬಳ್ಳಾರಿಯ ತಲಾ 2, ರಾಮನಗರ, ಚಿಕ್ಕಮಗಳೂರು, ಮೈಸೂರು, ರಾಯಚೂರು, ಹಾವೇರಿ ಹಾಗೂ ಉಡುಪಿಯ ತಲಾ 1 ಸ್ಟಾರ್ಟ್‌ಅಪ್‌ ಸ್ಪರ್ಧೆಯಲ್ಲಿ ಗೆದ್ದಿವೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.