ಜನತಾ ಕರ್ಫ್ಯೂಗೆ ಗಣಿಜಿಲ್ಲೆ ಸಂಪೂರ್ಣ ಸ್ತಬ್ಧ: ರಸ್ತೆಗಳು ಖಾಲಿ ಖಾಲಿ


Team Udayavani, Mar 22, 2020, 2:31 PM IST

ಜನತಾ ಕರ್ಫ್ಯೂಗೆ ಗಣಿಜಿಲ್ಲೆ ಸಂಪೂರ್ಣ ಸ್ತಬ್ಧ: ರಸ್ತೆಗಳು ಖಾಲಿ ಖಾಲಿ

ಬಳ್ಳಾರಿ: ಪ್ರಪಂಚವನ್ನೇ ಬೆಚ್ಚಿ ಬೀಳಿಸಿರುವ ಮಾರಕ ಕೋವಿಡ್-19 ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ಬಳ್ಳಾರಿ ನಗರ ಸೇರಿ ಇಡೀ ಜಿಲ್ಲೆ ಸಂಪೂರ್ಣ ಸ್ತಬ್ದವಾಗಿದೆ. ಜನತಾ ಕರ್ಫ್ಯೂಗೆ ಜಿಲ್ಲೆಯ ಜನರು ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿದ್ದು, ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿವೆ.

ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಮೊದಲೇ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಜಿಲ್ಲೆಯಲ್ಲೂ ಸಾಕಷ್ಟು ಜಾಗೃತಿ ಮೂಡಿರುವ ಹಿನ್ನೆಲೆಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಬೀದಿ ಬದಿ ಅಂಗಡಿ, ಉಪಾಹಾರ ಬಂಡಿಗಳು ಎಲ್ಲವೂ ಸಂಪೂರ್ಣವಾಗಿ ಬಂದ್ ಆಗಿವೆ.

ಇನ್ನು ನಗರ ಸಾರಿಗೆ ಸೇರಿ ದೂರದೂರುಗಳಿಗೆ ತೆರಳುವ ಬಸ್ ಗಳು ಸಹ ರಸ್ತೆಗಿಳಿಯದೆ ಬಸ್ ನಿಲ್ದಾಣದಲ್ಲೇ ನಿಲುಗಡೆಯಾಗಿವೆ. ಕೆಲವೊಂದು ಡಿಪೋ ಸೇರಿವೆ. ಇನ್ನು ಖಾಸಗಿ ಸಾರಿಗೆ ವಾಹನ, ಆಟೊ, ಇತರೆ ಪ್ರಯಾಣಿಕ ವಾಹನಗಳು ಬೆಳಗ್ಗೆಯಿಂದಲೇ  ರಸ್ತೆಗಿಳಿಲ್ಲ. ಪೆಟ್ರೋಲ್ ಬಂಕ್ ಗಳು ಕೆಲವೊಂದು ಬಂದ್ ಫಲಕ ಪ್ರದರ್ಶಿಸಿದರೂ, ಕೆಲವೊಂದು ವಾಹನಗಳಿಗೆ ಅನಿವಾರ್ಯವಾಗಿ ಪೆಟ್ರೋಲ್ ಹಾಕಲಾಗುತ್ತಿದ್ದಾರೆ. ಇನ್ನು ರಾಜ್ಯಸರ್ಕಾರ ಈಗಾಗಲೇ ಆದೇಶಿಸಿದಂತೆ ಚಿತ್ರಮಂದಿರಗಳ ಪ್ರದರ್ಶನ ರದ್ದುಪಡಿಸಿರುವುದು, ದೇವಾಸ್ಥಾನಗಳ ಬಂದ್ ಮುಂದುವರೆದಿದೆ.

ತರಕಾರಿ ಮಾರುಕಟ್ಟೆ ಬಂದ್

ಜನತಾ ಕರ್ಫ್ಯೂಗೆ ಪ್ರತಿದಿನ ಬೆಳಗ್ಗೆ ಜನರಿಂದ ಗಿಜಗುಡುತ್ತಿದ್ದ ಇಲ್ಲಿನ ತರಕಾರಿ ಮಾರುಕಟ್ಟೆ ಸಂಪೂರ್ಣ ಸ್ತಬ್ದವಾಗಿದೆ. ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಪೂರ್ಣ ಸ್ತಬ್ದವಾಗಿದೆ. ಆದರೆ, ಸಾರ್ವಜನಿಕರು ಸಹ ತರಕಾರಿ ಖರೀದಿಸಲು ಮಾರುಕಟ್ಟೆಗೆ ಆಗಮಿಸದಿರುವುದು ವಿಶೇಷ.

ಇನ್ನು ಸದಾ ಜನರಿಂದ, ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ನಗರದ ಪ್ರಮುಖ ಗಡಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಮೋತಿ ವೃತ್ತ, ರೈಲು ನಿಲ್ದಾಣ, ಹೊಸ ಬಸ್ ನಿಲ್ದಾಣ, ಹಳೇ ಬಸ್ ನಿಲ್ದಾಣ, ನಗರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದ್ದು, ಬಳ್ಳಾರಿ ನಗರ ಸೇರಿ ಜಿಲ್ಲೆಯ ಜನರಿಂದ ಜನತಾ ಕರ್ಫ್ಯೂಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.