ಚೀನ ಬಿಟ್ಟು ಭಾರತ ಅಥವಾ ಬಾಂಗ್ಲಾಕ್ಕೆ ಹೊರಡುವ ತನ್ನ ಕಂಪೆನಿಗಳಿಗೆ ಜಪಾನ್‌ ನೆರವು

Team Udayavani, Sep 4, 2020, 7:48 PM IST

Japan_manufacturing_China_1

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಟೊಕಿಯೋ: ಚೀನದ ಕಂಪೆನಿಗಳಿಗೆ ಭಾರತ ಕಠಿನ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದು ಚೀನ ಸಂಸ್ಥೆಗಳಿಗೆ ನಡುಕ ಹುಟ್ಟಿಸಿದ್ದು, ಚೀನದ ವಸ್ತುಗಳನ್ನು ಯಾರೂ ಕೊಂಡುಕೊಳ್ಳಲು ಮುಂದೆ ಬರುತ್ತಿಲ್ಲ. ಇದರ ಲಾಭ ಪಡೆದುಕೊಳ್ಳಲು ಜಪಾನ್‌ ಕಂಪೆನಿಗಳು ಮುಂದಾಗಿವೆ.

ಪರಿಣಾಮವಾಗಿ ಜಪಾನ್‌ನ ಸಂಸ್ಥೆಗಳು ಭಾರತದತ್ತ ಮುಖ ಮಾಡಿದ್ದು, ಇವುಗಳಿಗೆ ಜಪಾನ್‌ ಉತ್ತಮ ಆಫ‌ರ್‌ಗಳನ್ನು ಘೋಷಿಸಿದೆ.
ಜಪಾನ್‌ನ ಆರ್ಥಿಕ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯ (ಎಂಇಟಿಐ ಚೀನದಿಂದ ) ತಮ್ಮ ಉತ್ಪಾದನಾ ತಾಣಗಳನ್ನು ಆಸಿಯಾನ್‌ ದೇಶಗಳಿಗೆ ಸ್ಥಳಾಂತರಿಸುವ ಕಂಪೆನಿಗಳಿಗೆ ನೆರವನ್ನು ನೀಡಲು ಮುಂದಾಗಿದೆ.

ಚೀನದಲ್ಲಿರುವ ಜಪಾನ್‌ ಮೂಲದ ಕಂಪೆನಿಗಳು ಭಾರತಕ್ಕೆ ಸ್ಥಳಾಂತರಿಸುವ ಯೋಜನೆ ಇದ್ದರೆ, ಸರಕಾರವೂ ಅದಕ್ಕೆ ಪ್ರೋತ್ಸಾಹ ನೀಡಲಿದೆ ಎಂದು ಜಪಾನ್‌ ಹೇಳಿದೆ. ಭಾರತದತ್ತ ಮುಖ ಮಾಡುವ ಸಂಸ್ಥೆಗಳಿಗೆ ಹಣಕಾಸಿನ ನೆರವು ಮತ್ತು ಸಬ್ಸಿಡಿ ನೀಡಲಿದೆ. ಚೀನದಲ್ಲಿನ ತಮ್ಮ ಸಂಸ್ಥೆಯನ್ನು ಸ್ಥಳಾಂತರ ಮಾಡಲು ಸಂಸ್ಥೆ ಇಚ್ಚಿಸಿದರೆ ನೆರವನ್ನು ಒದಗಿಸಲು ಜಪಾನ್‌ ಸಿದ್ಧವಾಗಿದೆ.

ಇದಕ್ಕಾಗಿ 221 ಮಿಲಿಯನ್‌ ಅಮೆರಿಕನ್‌ ಡಾಲರ್‌ ಮೊತ್ತದ ಹಣಕಾಸು ನಿಧಿಯನ್ನು ಮೀಸಲಿರಿಸಿದೆ. ಜಪಾನ್‌ ಸರಕಾರದ ಈ ನಿರ್ಧಾರ ಭಾರತ ಹಾಗೂ ಬಾಂಗ್ಲಾದೇಶಕ್ಕೆ ಅನ್ವಯವಾಗಲಿದೆ. ಹಾಗೆ ನೋಡಿದರೆ ಜಪಾನ್‌ನ ಈ ನಡೆಗೆ ಕಾರಣವೂ ಇದೆ. ನೆರೆಯ ಜಪಾನ್‌ ತನ್ನ ಮಾರ್ಕೆಟಿಂಗ್‌ ಚೈನ್‌ಗೆ ಚೀನವನ್ನೂ ಹೆಚ್ಚು ಅವಲಂಭಿಸಿದೆ. ಈ ಹಿನ್ನೆಲೆಯಲ್ಲಿ ಚೀನದ ಎಲ್ಲ ವಸ್ತುಗಳನ್ನು ಭಾರತದ ನಿಷೇಧಿಸಿದರೆ ತನ್ನ ಮಾರುಕಟ್ಟೆಯನ್ನು ಕಳೆದುಕೊಳ್ಳುವ ಭೀತಿ ಅದಕ್ಕಿದೆ. ಕೋವಿಡ್‌ ವೈರಸ್‌ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ರಫ್ತು ಮತ್ತು ಆಮದು ಸಂಪೂರ್ಣ ಸ್ಥಗಿತಗೊಂಡಿತ್ತು. ಇದಕ್ಕೆ ಜಪಾನ್‌ ಹೊರತಾಗಿಲ್ಲ. ಚೀನದೊಂದಿಗಿನ ತನ್ನ ವ್ಯಾಪಾರ ಪ್ರಮಾಣ ಕಡಿತವಾದ ಹಿನ್ನೆಲೆಯಲ್ಲಿ ಜಪಾನ್‌ ಇದೀಗ ಏಷ್ಯಾದತ್ತ ಮುಖ ಮಾಡಿದೆ.

ಸಬ್ಸಿಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ, ಜಪಾನ್‌ ಒಂದು ನಿರ್ದಿಷ್ಟ ಪ್ರದೇಶದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮುಂದಾಗಿದೆ. ತುರ್ತು ಪರಿಸ್ಥಿತಿಯಲ್ಲಿಯೂ ವೈದ್ಯಕೀಯ ಸಾಮಗ್ರಿಗಳು ಮತ್ತು ಎಲೆಕ್ಟ್ರಾನಿಕ್‌ ಘಟಕಗಳ ಸ್ಥಿರ ಪೂರೈಕೆಯನ್ನು ಒದಗಿಸಲು ಸಾಧ್ಯವಾಗುವಂತಹ ವ್ಯವಸ್ಥೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ನಿಕ್ಕಿ ಏಷ್ಯನ್‌ ರಿವ್ಯೂ ವರದಿ ಮಾಡಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.