ಕಾಗೇರಿ ಹೊಸ ವಿಧಾನಸಭಾಧ್ಯಕ್ಷ
ಅವಿರೋಧವಾಗಿ ಆಯ್ಕೆ, ಇಂದು ಘೋಷಣೆ
Team Udayavani, Jul 31, 2019, 6:05 AM IST
ಬೆಂಗಳೂರು: ರಮೇಶ್ ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನಸಭೆ ಸಭಾಧ್ಯಕ್ಷರ ಹುದ್ದೆಗೆ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ನೇಮಕವಾಗುವುದು ಖಚಿತವಾಗಿದೆ.
ಮಂಗಳವಾರ ಸಭಾಧ್ಯಕ್ಷ ಹುದ್ದೆಗೆ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಮಂಗಳವಾರ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಟಿ. ರವಿ, ಸುರೇಶ್ಕುಮಾರ್, ಜೆ.ಸಿ. ಮಾಧುಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಹಾಲಿ ವಿಧಾನಸಭೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ನ 17 ಶಾಸಕರು ಅನರ್ಹಗೊಂಡಿರುವುದರಿಂದ ಬಿಜೆಪಿ ಸದನದಲ್ಲಿ ಸ್ಪಷ್ಟ ಬಹುಮತ ಹೊಂದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವತಿಯಿಂದ ಸ್ಪೀಕರ್ ಹುದ್ದೆಗೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದುದರಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.
• ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಸ್ಥಾನದ ಅಭ್ಯರ್ಥಿ
● ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!