ಕಲಬುರಗಿ: ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ ಸಾವು
Team Udayavani, Jun 16, 2021, 9:02 PM IST
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕಳೆದ ವಾರ ಅತ್ಯಾಚಾರ ಯತ್ನಕ್ಕೊಳಾಗಿದ್ದ ಕೋವಿಡ್ ಸೋಂಕಿತೆ, 25 ವರ್ಷದ ಮಹಿಳೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ತೀವ್ರ ಶಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಯ ಆರೋಗ್ಯ ಕ್ಷಿಣಿಸಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಲಬುರಗಿ ನಗರದ ನಿವಾಸಿಯಾಗಿದ್ದ ಮಹಿಳೆ ಕೋವಿಡ್ ಸೋಂಕಿನ ಕಾರಣ ಜೂನ್ 6ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮರುದಿನವೇ ಅಂದರೆ ಜೂ.7-8ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈಕೆ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು.
ಖಾಸಗಿ ಆಂಬ್ಯುಲೆನ್ಸ್ ಚಾಲಕ, ಇಲ್ಲಿನ ಫಿಲ್ಟರ್ ಬೆಡ್ ನಿವಾಸಿ ಪಿಂಟು ಎಂಬುವವ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂದರ್ಭದಲ್ಲಿ ಮಹಿಳೆ ಎಚ್ಚರಗೊಂಡು ಚೀರಿಕೊಂಡಾಗ ಆರೋಪಿ ಪರಾರಿಯಾಗಿದ್ದ. ಈ ಪ್ರಕರಣ ಸಂಬಂಧ ಈಗಾಗಲೇ ಆರೋಪಿಯನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ :ಸಿಎಂ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ :ಅರುಣ್ ಸಿಂಗ್
ಕೋವಿಡ್ ಸೋಂಕಿನ ಕಾರಣ ಮಹಿಳೆಯ ಶಾಸಕೋಶಗಳು ಸಾಕಷ್ಟು ಹಾನಿಯಾಗಿದ್ದವು. ಹೀಗಾಗಿ ವೆಂಟಿಲೇಟರ್ ನಲ್ಲಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಅತ್ಯಾಚಾರ ಯತ್ನ ಆರೋಪ ಪ್ರಕರಣ ಇದ್ದರಿಂದ ಅಗತ್ಯ ವೈದ್ಯಕೀಯ ಪರೀಕ್ಷೆಗಳು ಮತ್ತು ಕೋವಿಡ್ ನಿಯಮಾವಳಿ ಪ್ರಕಾರ ಮರಣೋತ್ತರ ಪರೀಕ್ಷೆ ಕೂಡ ಮಾಡಲಾಗುವುದು ಎಂದು ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ