ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಳೆದು ಹೋದರೆ ಕರ್ನಾಟಕದಲ್ಲೇ ಕನ್ನಡ ತಬ್ಬಲಿ ಆದಂತೆ

Team Udayavani, Feb 29, 2020, 5:49 PM IST

kannada-sahitya-sammelana-min

ಬೀದರ್: ರಾಜ್ಯದಲ್ಲಿ ಸಾವಿರ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದ್ದು ಹಿಂದಿನ ಸರ್ಕಾರದ ತಪ್ಪು ಹೆಜ್ಜೆ. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಕಳೆದು ಹೋದರೆ ಕರ್ನಾಟಕದಲ್ಲೇ ಕನ್ನಡ ತಬ್ಬಲಿ ಆಗುತ್ತದೆ. ಇದನ್ನು ತಪ್ಪಿಸಬೇಕಾದರೆ ಗುಣಾತ್ಮಕ ಶಿಕ್ಷಣ ಸಿಗುವಂತೆ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ಧರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನಗರದ ರಂಗ ಮಂದಿರದಲ್ಲಿ ಶನಿವಾರ ಜಿಲ್ಲಾ ಕಸಾಪ ಆಯೋಜಿಸಿದ್ದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ಶಾಲೆಗಳು ಮುಚ್ಚಿಹೋಗಲು ಇಂಗ್ಲಿಷ ಮೋಹ ಕಾರಣವಲ್ಲ. ಇಂದಿಗೂ ಕಾನ್ವೆಂಟ್ ಶಾಲೆಯಲ್ಲಿದ್ದ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ದಾಖಲು ಮಾಡುತ್ತಿದ್ದಾರೆ. ಮಕ್ಕಳಲ್ಲಿ ಸೃಜನಶಕ್ತಿ ಬೆಳೆಸುವ ಶಕ್ತಿ ನೆಲದ ಬಾಷೆಗಿದೆ ಹೊರತು ಪರ ಭಾಷೆಗಲ್ಲ ಎಂದು ಹೇಳಿದರು.

ನೆಲದ ಭಾಷೆ ಶಿಕ್ಷಣ ಮಾಧ್ಯವಾಗಲಿ:
ವೈಜ್ಞಾನಿಕ ದೃಷ್ಟಿಕೋನದಿಂದ ನೆಲದ ಭಾಷೆಯನ್ನು ಶಿಕ್ಷಣದ ಮಾಧ್ಯಮವಾಗಿಸುವ ಅವಶ್ಯಕತೆ ಇದೆ. ಒಂದು ಭಾಷೆಯಾಗಿ ಇಂಗ್ಲಿಷ ಕಲಿಸಬೇಕೆ ಹೊರತು ಮಾಧ್ಯಮಗಿ ಬೇಡ. ಎದೆ ಹಾಲು ಕುಡಿಯುವ ಮಕ್ಕಳಿಗೆ ಅನ್ನ ತುರುಕಿದಂತೆ ಇಂಗ್ಲಿಷನ್ನು ತುರುಕುವುದಲ್ಲ. ಕನ್ನಡ ಮಾಧ್ಯಮದಲ್ಲಿ ಓದಿ ಬೆಳೆದ ನಂತರ ಆಂಗ್ಲ ಕಲಿಸುವ ಪ್ರಯತ್ನ ಮಾಡಲಿ. ಸರ್ಕಾರಿ ವಲಯದಲ್ಲಿ ಇಂಗ್ಲಿಷ ಭಾಷೆ ಆರಂಭಿಸಿದರೆ ಆಂಗ್ಲದ ಪೆಡಂಭೂತಕ್ಕೆ ಹೆದರಿ ದಲಿತರು ಮತ್ತು ರೈತರ ಮಕ್ಕಳು ಡ್ರಾಪೌಟ್ ಆಗುವ ಸಂಖ್ಯೆ ಹೆಚ್ಚುತ್ತದೆ. ಈ ದಿಸೆಯಲ್ಲಿ ಸಾಹಿತ್ಯ ಪರಿಷತ್ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಉಳಿಸಬೇಕಾದ ಜವಾಬ್ದಾರಿ ಹೊರಬೇಕಿದೆ ಎಂದು ಕರೆ ನೀಡಿದರು.

ದೇಶದಲ್ಲಿ ಪ್ರಾದೇಶಿಕ ಭಾಷೆಗಳ ಕಡೆಗಣನೆ ವೇಗವಾಗಿ ನಡೆದಿದ್ದು, ಇದರಿಂದ ಆಯಾ ರಾಜ್ಯದ ಪ್ರಾದೇಶಿಕ ಪ್ರಜೆಗಳು ಉದ್ಯೋಗದಿಂದ ವಂಚಿತರಾಗುತ್ತಿದ್ದರೆ. ಕರ್ನಾಟಕದಲ್ಲಿ ಕಳೆದ ಐದು ವರ್ಷದಲ್ಲಿ 18 ಸಾವಿರ ಹುದ್ದೆಗಳಲ್ಲಿ ಕೇವಲ 1080 ಹುದ್ದೆ ಬಿಟ್ಟರೇ ಮಿಕ್ಕನವು ಹೊರಗಿನವರಿಗೆ ದಕ್ಕಿವೆ. ನಾನು ವಲಸಿಗರನ್ನು ವಿರೋಧಿಸುತ್ತಿಲ್ಲ. ಆದರೆ, ಮನೆಯವರನ್ನು ಹೊರಗೆ ಹಾಕಿ, ಮನೆತುಂಬ ಹೊರಗಿನವರನ್ನು ತುಂಬಿಕೊಳ್ಳುವಂಥ ವಲಸೆ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕವಾಗಿದೆ. ಈ ಬೆಳವಣಿಗೆ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವಂಥದ್ದು. ಈ ವಿಷಯದಲ್ಲಿ ಸಾಹಿತ್ಯ ಪರಿಷತ್ ಸಾಕ್ಷಿ ಪ್ರಜ್ಞೆ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ ಎಂದರು.

ಅರಮನೆಯಲ್ಲಿ ಪಂಡಿತರ ಸ್ವತ್ತಾಗಿದ್ದ ಸಾಹಿತ್ಯವನ್ನು ಜನರ ಸಾಮಾನ್ಯರ ಮಡಿಲಿಗೆ ಒಪ್ಪಸುವ ದೃಷ್ಟಿಯಿಂದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಒಂದು ಸಂಸ್ಥೆಯಾಗಿ ಹುಟ್ಟು ಹಾಕಿದ್ದ ಕನ್ನಡ ಸಾಹಿತ್ಯ ಪರಿಷತ್ ಇಂದು ಕನ್ನಡ ನಾಡು ಮಾತ್ರವಲ್ಲ ದೇಶ- ವಿದೇಶಕ್ಕೆ ವಿಸ್ತರಿಸಿಕೊಂಡಿದೆ. ಕನ್ನಡಿಗರ ಬದುಕಿನ ಸಾಕ್ಷಿ ಪ್ರಜ್ಞೆಯಾಗಿ, ಆಡಳಿತ ವರ್ಗಕ್ಕೆ ನಿರ್ದೇಶನ ನೀಡುವಂಥ ಸ್ವಾಯತ್ತ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹೇಳಿದರು.

ಭಾಲ್ಕಿಯ ಡಾ. ಬಸವಲಿಂಗ ಪಟ್ಟದ್ದೇವರು, ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು, ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಶಾಸಕ ರಹೀಮ್ ಖಾನ್, ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ, ಸಮ್ಮೇಳನಾಧ್ಯಕ್ಷ ಡಾ. ಸೋಮನಾಥ ಯಾಳವಾರ, ನಿಕಟಪೂರ್ವ ಅಧ್ಯಕ್ಷರಾದ ಅಕ್ಕ ಅನ್ನಪೂರ್ಣ ತಾಯಿ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮತ್ತಿತರರು ವೇದಿಕೆಯಲ್ಲಿದ್ದರು.

ಸರೋಜಿನಿ ಮಹಿಷಿ ಪರಿಷ್ಕೃತ ವರದಿಯಲ್ಲಿ ಸರ್ಕಾರಿ – ಖಾಸಗಿ ಸೇರಿ ಎಲ್ಲ ಕ್ಷೇತ್ರಕ್ಕೂ ಅನ್ವಯವಾಗುವಂಥ, ಕನ್ನಡಿಗರಿಗೆ ಬದುಕಿನ ಆರೋಗ್ಯ ಕಾಪಾಡುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಿ ಅನುಷ್ಠಾನ ಮಾಡುವಂಥ ಶಿಫಾರಸ್ಸುಗಳಿದ್ದು, ಸರ್ಕಾರ ಕೂಡಲೇ ವರದಿಯನ್ನು ಜಾರಿಗೆ ತರಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ಧರಾಮಯ್ಯ ಆಗ್ರಹಿಸಿದರು.

ನಗರದ ರಂಗ ಮಂದಿರದಲ್ಲಿ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಹಿಂದೆ ಸಲ್ಲಿಕೆಯಾಗಿರುವ ವರದಿಯಲ್ಲಿ ಅಪ್ರಸ್ತುತ ಅಂಶಗಳು ಹೆಚ್ಚಾಗಿದ್ದು, ಈಗ ಸಾಕಷ್ಟು ಆಡಳಿತಾತ್ಮಕ, ಶೈಕ್ಷಣಿಕ ಬದಲಾವಣೆಗಳಾಗಿವೆ. ಹಾಗಾಗಿ ಸರ್ಕಾರ ಪ್ರಾಧಿಕಾರದ ಮೂಲಕ ಹೊಸ ಪರಿಷ್ಕರಣಾ ವರದಿ ಸ್ವೀಕರಿಸಿದೆ. ಇದರಲ್ಲಿ ರಾಜ್ಯ ಸರ್ಕಾರವೇ ಸಂವಿಧನಾತ್ಮಕವಾಗಿ ಜಾರಿಗೆ ತರುವಂಥ 14 ಶಿಫಾರಸ್ಸುಗಳಿದ್ದರೆ, 9 ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸುವಂಥ 9 ಶಿಫಾರಸ್ಸುಗಳಿವೆ. ಕರ್ನಾಟಕ ಮಾತ್ರವಲ್ಲದೇ ಉಳಿದೆಲ್ಲ ರಾಜ್ಯ ಭಾಷೆಗಳಿಗೂ ಅನ್ವಯವಾಗಲಿದೆ ಎಂದರು.

ಪರಿಷ್ಕೃತ ವರದಿ ಜಾರಿಗೊಂಡಲ್ಲಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿನಲ್ಲಿ ಶೇ. 100ರಷ್ಟು, ಬಿ ದರ್ಜೆಯಲ್ಲಿ ಶೇ. 80 ಮತ್ತು ಎ ದರ್ಜೆಯ ಹುದ್ದೆಗಳಲ್ಲಿ ಶೇ. 65ರಷ್ಟು ಕನ್ನಡಿಗರು, ಅಯಾ ಭಾಷಿಕರಿಗೆ ಸಿಗಲಿದೆ. ಇದರಿಂದ ಕರ್ನಾಟಕ ಮಾತ್ರವಲ್ಲದೇ ಎಲ್ಲ ರಾಜ್ಯಗಳಿಗೆ ಒಕ್ಕೂಟದ ವ್ಯವಸ್ಥೆಯಲ್ಲಿ ಸುಲಭ ಆಡಳಿತಾತ್ಮಕ ದೃಷ್ಟಿಗೂ ಪೂರಕಾಗಲಿದೆ. ಈ ವಿಷಯದಲ್ಲಿ ಸಾಹಿತ್ಯ ಪರಿಷತ್ ಮತ್ತು ಸಮ್ಮೇಳನಗಳ ಒತ್ತಾಸೆಯಾಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.