ಕನ್ನಡಿಗರು ವಿಶಾಲ ಹೃದಯವಂತಿಕೆಯುಳ್ಳವರು: ಪ್ರಧಾನಿ ಮೋದಿ ರಾಜ್ಯೋತ್ಸವ ಟ್ವೀಟ್ ನಲ್ಲೇನಿದೆ?
Team Udayavani, Nov 1, 2019, 10:10 AM IST
ಬೆಂಗಳೂರು: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ನಡೆಯುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಶುಕ್ರವಾರ (ನವೆಂಬರ್ 1) ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು, ಮುಂಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2019