ಇಂದಿನಿಂದ ಅಧಿವೇಶನ; ಕೈ ಎದುರಿಸಲು ಬಿಜೆಪಿ ಸಜ್ಜು

Team Udayavani, Oct 10, 2019, 6:45 AM IST

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ನಾವೆಲ್ಲರೂ ಒಟ್ಟಾಗಿ ವಿಪಕ್ಷಗಳ ಟೀಕೆ, ಟಿಪ್ಪಣಿಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಬಿಜೆಪಿ ಶಾಸಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾರ್ಗ ದರ್ಶನ ಮಾಡಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆದಿದೆ. ಈ ವೇಳೆ ಶಾಸಕರು ಕೂಡ ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳ ಮುಂದೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ರಾಜ್ಯದ 17 ಜಿಲ್ಲೆಗಳಲ್ಲಿ ಬಂದಿದ್ದ ಭೀಕರ ಪ್ರವಾಹ ಮತ್ತು ಭಾರೀ ಮಳೆಯಿಂದ ಆಗಿರುವ ಅನಾಹುತಗಳ ಪರಿಹಾರ ಕಾರ್ಯ ಹೇಗೆ ನಡೆದಿದೆ ಎಂಬ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆದಿದೆ. ಅಲ್ಲದೆ ಇದೇ ವಿಚಾರವಾಗಿ ಗುರುವಾರ ವಿಪಕ್ಷ ಸರಕಾರದ ಮೇಲೆ ಮುಗಿ ಬೀಳುವ ಸಾಧ್ಯತೆ ಇದೆ.

ಹೀಗಾಗಿ ಕೇಂದ್ರದಿಂದ ಬಂದಿರುವ ಅನುದಾನದ ಸದ್ಬಳಕೆ ಮತ್ತು ರಾಜ್ಯ ಸರಕಾರ ಪ್ರವಾಹಕ್ಕೆ ತುರ್ತಾಗಿ ಸ್ಪಂದಿಸಿರುವ ರೀತಿ ಹಾಗೂ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ಘೋಷಣೆ ಮಾಡಿರುವುದು ಸಹಿತ ಎಲ್ಲ ಅಂಶಗಳನ್ನು ತುಂಬಾ ಪರಿಣಾಮಕಾರಿಯಾಗಿ ಸದನದಲ್ಲಿ ಮಂಡನೆ ಮಾಡಬೇಕು. ಅಲ್ಲದೆ ಎಲ್ಲ ಮೂಲ ಗಳಿಂದಲೂ ರಾಜ್ಯ ಸರಕಾರವನ್ನು ಸಮರ್ಥಿಸಿ ಕೊಳ್ಳ ಬೇಕು. ಯಾವುದೇ ಕಾರಣಕ್ಕೂ ವಿಪಕ್ಷಗಳ ಟೀಕೆಗೆ ಕುಗ್ಗ ಬಾರದು ಎಂಬ ಖಡಕ್‌ ಸಂದೇಶವನ್ನು ಮುಖ್ಯಮಂತ್ರಿಗಳು ಶಾಸಕರಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ