ಕೆ.ಸಿ. ರಾಮಮೂರ್ತಿ ರಾಜೀನಾಮೆ
Team Udayavani, Oct 17, 2019, 5:55 AM IST
ಬೆಂಗಳೂರು: ಕಾಂಗ್ರೆಸ್‌ನ ಕೆ.ಸಿ. ರಾಮಮೂರ್ತಿ ತನ್ನ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಸೇರಲು ಒಲವು ವ್ಯಕ್ತಪಡಿಸಿದ್ದಾರೆ. ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇನ್ನೂ ಮೂರು ವರ್ಷ ಇತ್ತು. ಈ ಮೂಲಕ ಬಿಜೆಪಿಯಿಂದ ರಾಜ್ಯಸಭೆಯಲ್ಲಿಯೂ ಆಪರೇಷನ್ ಕಮಲ ಮಾಡಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಸಿ.ರಾಮಮೂರ್ತಿ, ಇದು ತತ್‌ಕ್ಷಣಕ್ಕೆ ತೆಗೆದುಕೊಂಡಿರುವ ನಿರ್ಧಾರ ಅಲ್ಲ. ಒಂದು ವರ್ಷದಿಂದಲೂ ವಿಚಾರ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಈ ಹಿಂದೆಯೇ ತಿಳಿಸಿದ್ದೆ. ಅವರು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ರಾಜೀನಾಮೆ ಸಲ್ಲಿಸುವ ಬಗ್ಗೆ ಸೋನಿಯಾ ಗಾಂಧಿ ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.