ರಾಜ್ಯ ಸರ್ಕಾರಿ ನೌಕರರಿಗೆ ಶೇ. 2.75 ತುಟ್ಟಿಭತ್ಯೆ ಹೆಚ್ಚಳ : ಜನವರಿಯಿಂದಲೇ ಪೂರ್ವಾನ್ವಯ
Team Udayavani, Apr 5, 2022, 1:43 PM IST
ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಜನವರಿ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ “ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ತುಟ್ಟಿಭತ್ಯೆಯನ್ನು ಶೇ 5ರಷ್ಟು ಹೆಚ್ಚಿಸಬೇಕು ಎಂದು ಸರ್ಕಾರಿ ನೌಕರರು ಮನವಿ ಮಾಡಿದ್ದರು. ಆದರೆ ಸರ್ಕಾರವು ಶೇ 2.75ರಷ್ಟು ತುಟ್ಟಿಭತ್ಯೆಗೆ ಸಮ್ಮತಿಸಿದೆ.
ಇತ್ತೀಚಿಗೆ ಕೇಂದ್ರ ಸರಕಾರವು ತನ್ನ ನೌಕರರಿಗೆ ಶೇ.3 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿತ್ತು.
“ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು”: ಮುಖ್ಯಮಂತ್ರಿ @BSBommai
— CM of Karnataka (@CMofKarnataka) April 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ