ಆನ್ ಲೈನ್ ಶಿಕ್ಷಣ ನಿಷೇಧಿಸಿದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
Team Udayavani, Jul 8, 2020, 4:45 PM IST
ಬೆಂಗಳೂರು : ಎಲ್ ಕೆ ಜಿಯಿಂದ 10ನೇ ತರಗತಿ ವರೆಗೆ ಆನ್ ಲೈನ್ ಶಿಕ್ಷಣವನ್ನು ನಿಷೇಧಿಸಿ ಹೊರಡಿಸಿದ ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಆನ್ ಲೈನ್ ಶಿಕ್ಷಣ ಕೋರಿ ಪಿಐಎಲ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ದ್ವಿ ಸದಸ್ಯ ಪೀಠ ಆನ್ ಲೈನ್ ಶಿಕ್ಷಣ ನಿಷೇಧಿಸುವ ಕುರಿತು ಸರಕಾರ ಜೂನ್ 15 ಹಾಗೂ ಜೂನ್ 27 ರಂದು ಎರಡು ಆದೇಶ ಹೊರಡಿಸಿದ್ದು ಈ ಎರಡೂ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು,
ಈ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ಕೆಲವೊಂದು ಅಭಿಪ್ರಾಯಗಳನ್ನು ಹಂಚಿದ್ದು ಆನ್ ಲೈನ್ ಶಿಕ್ಷಣ ವಿದ್ಯಾರ್ಥಿಗಳ ಮೂಲಭೂತ ಹಕ್ಕು ಸರಕಾರ ವಿದ್ಯಾರ್ಥಿಗಳ ಮೂಲಭೂತ ಹಕ್ಕನ್ನು ನಿರ್ಬಂದಿಸುವಂತಿಲ್ಲ, ಕೋವಿಡ್ 19 ಹಿನ್ನೆಲೆಯಲ್ಲಿ ಮಕ್ಕಳಿಗೆ ಆನ್ ಲೈನ್ ಶಿಕ್ಷಣದ ಅವಶ್ಯಕತೆ ಇದೆ ಎಂದು ಹೇಳಿದೆ.
ಸದ್ಯದ ಪರಿಸ್ಥಿತಿಯಲ್ಲಿ ಆನ್ಲೈನ್ ಶಿಕ್ಷಣ ಮಾತ್ರ ನೀಡಲು ಸಾಧ್ಯವಾಗತ್ತದೆ ಆನ್ಲೈನ್ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸರ್ಕಾರದ ನಿಲುವನ್ನು ಒಪ್ಪಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸರ್ಕಾರ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಬೇಕು ಅಂತ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ