ಕರ್ನಾಟಕ ರಾಜ್ಯೋತ್ಸವ ಇತಿಹಾಸ; ಏಕೀಕರಣದ ಕಾರಣಪುರುಷ…ಕನ್ನಡ ಕುಲಪುರೋಹಿತ ಆಲೂರು…

ನೂತನವಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

Team Udayavani, Oct 31, 2022, 1:39 PM IST

ಕರ್ನಾಟಕ ರಾಜ್ಯೋತ್ಸವ ಇತಿಹಾಸ; ಏಕೀಕರಣದ ಕಾರಣಪುರುಷ…ಕನ್ನಡ ಕುಲಪುರೋಹಿತ ಆಲೂರು…

ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈಗಿನ ಕರ್ನಾಟಕ ಮೊದಲು ಮೈಸೂರು ಪ್ರಾಂತ್ಯವಾಗಿತ್ತು. 1950ರಲ್ಲಿ ಭಾರತ ಗಣರಾಜ್ಯವಾದ ನಂತರ ದೇಶದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ ಮೈಸೂರು ರಾಜ್ಯ ಉದಯವಾಯಿತು.

ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು 1905ರಲ್ಲಿಯೇ ಕರ್ನಾಟಕ ಏಕೀಕರಣ ಚಳವಳಿ ಆರಂಭಿಸಿದ್ದರು. 1956ರ ನವೆಂಬರ್ 1ರಂದು ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ನೂತನವಾಗಿ ರೂಪುಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ಈ ಹಿನ್ನೆಲೆಯಲ್ಲಿ 1956ರ ನವೆಂಬರ್ 1ರಂದು ರಾಜ್ಯ ಉದಯವಾದ ಸಂಕೇತವಾಗಿ ರಾಜ್ಯೋತ್ಸವ ಆಚರಣೆಗೆ ಚಾಲನೆ ಸಿಕ್ಕಿತ್ತು. ಕರ್ನಾಟಕ ರಾಜ್ಯೋತ್ಸವ ದಿನವನ್ನು ವಿಶ್ವಾದ್ಯಂತ ಕನ್ನಡಿಗರು ಸಂಭ್ರಮದಿಂದ ಆಚರಿಸಲಿದ್ದು, ಕರ್ನಾಟಕ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುತ್ತದೆ.

ಹಳದಿ-ಕೆಂಪು ಬಾವುಟ:

ನವೆಂಬರ್ 1ರಂದು ರಾಜ್ಯಾದ್ಯಂತ ಕೆಂಪು ಮತ್ತು ಹಳದಿ ಬಣ್ಣದ ಕನ್ನಡ ಧ್ವಜಗಳು ಎಲ್ಲೆಡೆ ರಾರಾಜಿಸಲಿದೆ. ಕನ್ನಡ ಚಳವಳಿ ಹೋರಾಟಗಾರ ಎಂ.ರಾಮಮೂರ್ತಿಯವರು ಈ ಹಳದಿ, ಕೆಂಪು ಬಾವುಟವನ್ನು ಪ್ರಥಮ ಬಾರಿಗೆ ತಯಾರಿಸಿ ಬಳಸಿದ್ದರು. ಮುಂಬಯಿ, ದೆಹಲಿ ಮುಂತಾದ ಸ್ಥಳಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರ್ಗಾಂವ್, ಚೆನ್ನೈ, ಅಮೆರಿಕ, ಸಿಂಗಾಪುರ್, ದುಬೈ, ಮಸ್ಕತ್, ನ್ಯೂಜಿಲ್ಯಾಂಡ್ ಸೇರಿದಂತೆ ವಿವಿಧೆಡೆ ನೆಲೆಸಿರುವ ಕನ್ನಡಿಗರು ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸುತ್ತಾರೆ.

1973ರ ನವೆಂಬರ್ 1ರಂದು ರಾಜ್ಯದ ಹೆಸರನ್ನು “ಕರ್ನಾಟಕ” ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ದೇವರಾಜ್ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದ ಏಕೀಕರಣಕ್ಕಾಗಿ ಅನಕೃ, ಕೋಟ ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಸೇರಿದಂತೆ ಹಲವಾರು ಗಣ್ಯರು ಶ್ರಮಿಸಿದ್ದರು.

ಆಲೂರು ವೆಂಕಟರಾಯರು:

ಆಲೂರು ವೆಂಕಟರಾಯರು ಕನ್ನಡ ಸಾಹಿತ್ಯ ಲೋಕದ ಪ್ರಮುಖರಲ್ಲೊಬ್ಬರು. ಕನ್ನಡ ಸಾಹಿತ್ಯ, ಪತ್ರಿಕೋದ್ಯಮ, ಸಾಂಸ್ಕೃತಿಕ ವಲಯದಲ್ಲಿ ನೀಡಿರುವ ಕಾಯಕಲ್ಪದಿಂದ ಕನ್ನಡ ಕುಲಪುರೋಹಿತ ಎಂಬ ಗೌರವಾನ್ವಿತ ಸ್ಥಾನ ಪಡೆದುಕೊಂಡಿದ್ದಾರೆ. ಆಲೂರು ವೆಂಕಟರಾಯರು 1880ರ ಜುಲೈ 12ರಂದು ವಿಜಯಪುರದಲ್ಲಿ ಜನಿಸಿದ್ದರು. ಇವರ ವಂಶಜರು ಧಾರವಾಡ ಸಮೀಪದ ಆಲೂರ(ಈಗಿನ ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ)ಗೆ ಬಂದು ನೆಲೆಸಿದ್ದರಿಂದ ಆಲೂರು ಇವರ ಮನೆತನದ ಹೆಸರಾಯಿತು. ತಂದೆ ಭೀಮರಾಯ, ತಾಯಿ ಭಾಗೀರಥಮ್ಮ.

1921ರಲ್ಲಿ ಮಹಾತ್ಮ ಗಾಂಧಿಯವರು ಆರಂಭಿಸಿದ ಸತ್ಯಾಗ್ರಹ ಚಳವಳಿಯಲ್ಲಿ ಆಲೂರು ಭಾಗವಹಿಸಿದ್ದರು. ಕರ್ನಾಟಕ ಏಕೀಕರಣ, ಕರ್ನಾಟಕ ಇತಿಹಾಸ ಮಂಡಲ ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ, ಕರ್ನಾಟಕ ವಿವಿ ಕಲ್ಪನೆ, ವಿಜಯನಗರ ಮಹೋತ್ಸವ, ನಾಡಹಬ್ಬ ಯೋಜನೆ, ಕರ್ನಾಟಕ ವಿದ್ಯಾವರ್ಧಕ ಸಂಘ(ಧಾರವಾಡ) ಯೋಜನೆಗಳಲ್ಲಿ ಆಲೂರು ವೆಂಕಟರಾಯರು ಮಹತ್ವದ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.