ರಾಜ್ಯ ಬಜೆಟ್ 2020: ಪೆಟ್ರೋಲ್, ಡೀಸೆಲ್, ಮದ್ಯ ಬೆಲೆ ಏರಿಕೆ
Team Udayavani, Mar 5, 2020, 12:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಮದ್ಯದ ದರ ಹೆಚ್ಚಳವಾಗಿದೆ.
ಈ ಬಾರಿ ಮಂಡಿಸಿದ ಬಜೆಟ್ ನಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯನ್ನು ಶೇ.32ರಿಂದ 35ಕ್ಕೆ ಏರಿಸಲಾಗಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ.21ರಿಂದ ಶೇ.24ಕ್ಕೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಏರಿಸಲಾಗಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆಯಿಂದಾಗಿ ಪೆಟ್ರೋಲ್ ಪ್ರತೀ ಲೀಟರ್ ಗೆ 1.60ರೂಪಾಯಿ ಮತ್ತು ಡಿಸೇಲ್ ದರ ಪ್ರತೀ ಲೀಟರ್ ಗೆ 1.59 ರೂಪಾಯಿ ಏರಿಕೆಯಾಗಲಿದೆ.
ಈ ಬಾರಿಯ ಬಜೆಟ್ ನಲ್ಲಿ ಸಂಪನ್ಮೂಲ ಕ್ರೋಢೀಕರಣದತ್ತ ಹೆಚ್ಚಿನ ದೃಷ್ಟಿ ನೆಟ್ಟಿರುವ ಮುಖ್ಯಮಂತ್ರಿಯವರು ಈ ಕಾರಣದಿಂದಾಗಿ ಅಬಕಾರಿ ಹಾಗೂ ಇಂಧನ ತೆರಿಗೆಗಳನ್ನು ಹೆಚ್ಚಿಸುವ ಮೂಲಕ ನೇರವಾಗಿ ಜನಸಾಮಾನ್ಯರ ಜೇಬಿಗೇ ಕೈ ಹಾಕಿದ್ದಾರೆ.