ಕಾಪು: ಬಸ್ ಢಿಕ್ಕಿ; ಶಾಲಾ ವಿದ್ಯಾರ್ಥಿನಿ ಗಂಭೀರ
Team Udayavani, Mar 11, 2023, 9:19 AM IST
ಕಾಪು: ಖಾಸಗಿ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಶನಿವಾರ (ಮಾ.11) ಬೆಳಗ್ಗೆ ನಡೆದಿದೆ.
ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಳು ವಿದ್ಯಾರ್ಥಿನಿ.
ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್