
ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ
ಬಾಹುಬಲಿ 2 ಚಿತ್ರ 1,810 ಕೋಟಿ ರೂಪಾಯಿ ಗಳಿಸಿತ್ತು.
Team Udayavani, May 18, 2022, 3:30 PM IST

ನವದೆಹಲಿ: ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಜಾಗತಿಕವಾಗಿ ಬಿಡುಗಡೆಯಾಗಿ ನಾಲ್ಕು ವಾರ ಕಳೆದಿದ್ದು, ಇದೀಗ ಐದನೇ ವಾರಕ್ಕೆ ಕಾಲಿಟ್ಟಿದ್ದು, ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. 5ನೇ ವಾರದಲ್ಲಿ ವಿಶ್ವಾದ್ಯಂತ ಕೆಜಿಎಫ್ ಚಾಪ್ಟರ್ 2 ಸಿನಿಮಾ 1,200 ಕೋಟಿ ರೂಪಾಯಿ ಕ್ಲಬ್ ಗೆ ಸೇರುವ ಮೂಲಕ ದಾಖಲೆ ಬರೆದಿದೆ.
ಇದನ್ನೂ ಓದಿ:ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವಮಟ್ಟದಲ್ಲಿ 1,200 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಈ ಸಾಧನೆ ಮಾಡಿರುವ ಮೂರನೇ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆಯಾಗಿ 34 ದಿನಗಳಾಗಿದ್ದು, ಕೆಜಿಎಫ್ ಚಾಪ್ಟರ್ 2 ಚಿತ್ರ 1,200 ಕೋಟಿ ರೂಪಾಯಿ ಕ್ಲಬ್ ಗೆ ಸೇರಿದ್ದು, ಅಮೀರ್ ಖಾನ್ ನಟನೆಯ ದಂಗಲ್ ಸಿನಿಮಾ 1,968.03 ಕೋಟಿ ರೂಪಾಯಿ ಹಾಗೂ ಬಾಹುಬಲಿ 2 ಚಿತ್ರ 1,810 ಕೋಟಿ ರೂಪಾಯಿ ಗಳಿಸಿತ್ತು.
ಅಮೆಜಾನ್ ಪ್ರೈಮ್ ನಲ್ಲಿ ಕೆಜಿಎಫ್ 2 ವೀಕ್ಷಿಸಿ:
ಈ ವರ್ಷ ಭರ್ಜರಿ ಯಶಸ್ಸು ಕಂಡ ಹಾಗೂ ಜಾಗತಿಕ ಮಟ್ಟದಲ್ಲಿ ದಾಖಲೆ ಬರೆದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಅಮೆಜಾನ್ ಪ್ರೈಮ್ ನಲ್ಲಿ ಮೇ 27ಕ್ಕೆ ಬಿಡುಗಡೆಯಾಗುತ್ತಿದೆ. ಆದರೆ ಅದಕ್ಕೂ ಮುನ್ನವೇ ಚಿತ್ರ ವೀಕ್ಷಿಸಲು 199 ರೂಪಾಯಿ ಪಾವತಿಸಿ ಮನೆಯಲ್ಲಿಯೇ ಸಿನಿಮಾ ವೀಕ್ಷಿಸಬಹುದಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

Leo 2nd Song ರಿಲೀಸ್: “Badass” ಮೂಲಕ ಹೈಪ್ ಹೆಚ್ಚಿಸಿದ ʼಲಿಯೋದಾಸ್ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್
MUST WATCH
ಹೊಸ ಸೇರ್ಪಡೆ

Kudremukha ರಾಷ್ಟ್ರೀಯ ಉದ್ಯಾನವನದ ಬಾಲ್ ಗಲ್ ಬಳಿ ಟ್ರಾಫಿಕ್ ಜಾಮ್

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

ಸಚಿವ ಸ್ಥಾನ ಪಡೆದ ಬಳಿಕ ಮೊದಲ ಸಲ ಮತಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ

Dr. TMA Pai Convention Centre; 3 ದಿನಗಳ “ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋಗೆ’ ಚಾಲನೆ