ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ
Team Udayavani, Mar 22, 2020, 5:37 PM IST
ಬೆಂಗಳೂರು: ನಾಳೆ ನಡೆಯಬೇಕಿದ್ದ ದ್ವಿತೀಯ ಪಿ.ಯು. ಪರೀಕ್ಷೆಯನ್ನು ರಾಜ್ಯ ಸರಕಾರ ಮುಂದೂಡಿದೆ.
ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದ ಅಂತಿಮ ವಿಷಯವಾಗಿ ನಾಳೆ ಇಂಗ್ಲಿಷ್ ಭಾಷಾ ಪರೀಕ್ಷೆ ನಡೆಯಬೇಕಿತ್ತು. ಇದೀಗ ಅದನ್ನು ಮುಂದೂಡಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಮಾರ್ಚ್ 31ರ ನಂತರ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.