ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ‘ಕುಶಲ ಕೋಶ’ ಆ್ಯಪ್ ಲೋಕಾರ್ಪಣೆ ಮಾಡಿದ ನಾರಾಯಣ ಗೌಡ

Team Udayavani, Jun 21, 2021, 4:42 PM IST

ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ‘ಕುಶಲ ಕೋಶ’ ಆ್ಯಪ್ ಲೋಕಾರ್ಪಣೆ ಮಾಡಿದ ನಾರಾಯಣ ಗೌಡ

ಬೆಂಗಳೂರು: ಜನಸಾಮಾನ್ಯರ ತುರ್ತು ಅಗತ್ಯ ಸೇವೆಗಳನ್ನು ಪಡೆಯಲು ಹಾಗೂ ಕುಶಲಕರ್ಮಿಗಳಿಗೆ ಉತ್ತಮ ಉದ್ಯೋಗಾವಕಾಶ ಒದಗಿಸಲು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ‘ಕುಶಲ ಕೋಶ’ ಮೊಬೈಲ್ ಅಪ್ಲೀಕೇಶನ್ ಅನ್ನು ತಯಾರಿಸಿದ್ದು, ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಇಂದು ಲೋಕಾರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಕುಶಲ ಕೋಶ’ ಮೊಬೈಲ್ ಆಪ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಬಹಳ ಅನುಕೂಲವಾಗುವಂತಹ ಅಪ್ಲಿಕೇಶನ್ ಇದಾಗಿದೆ. ಜನರು ತಮಗೆ ಅಗತ್ಯವಿರುವ ಕಾರ್ಯಕ್ಕೆ ಸುಲಭದಲ್ಲಿ ಕೌಶಲ್ಯಯುತ ವ್ಯಕ್ತಿಗಳನ್ನು ಪತ್ತೆ ಹಚ್ಚಬಹುದು. ಜೊತೆಗೆ ಬೇರೆ ಬೇರೆ ಉದ್ಯೋಗದಲ್ಲಿ ಕೌಶಲ್ಯ ಹೊಂದಿರುವವರು ತಮ್ಮ ವಿವರವನ್ನು ಅಪ್ಲಿಕೇಶನ್‍ನಲ್ಲಿ ನೊಂದಾಯಿಸಿ, ಉದ್ಯೋಗವನ್ನೂ ಪಡೆದುಕೊಳ್ಳಬಹುದು. ‘ಕುಶಲಕೋಶ ಎಂಬ ಈ ಅಪ್ಲಿಕೇಶನ್‍ನ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದರು.

“ಕುಶಲ ಕೋಶ” ಈ ದ್ವಿಭಾಷಾ ಮೊಬೈಲ್‌ ಅಪ್ಲಿಕೇಷನ್ ಅನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯು ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (ಕೆಎಸ್‌ಆರ್‌ಎಸ್‌ಎಸಿ) ಹಾಗೂ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಪ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ.

ಇದನ್ನೂ ಓದಿ:ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ: ಸಚಿವೆ ಶಶಿಕಲಾ ಜೊಲ್ಲೆ

ಯೋಗ ಶಿಕ್ಷಕರಿಗಾಗಿ ಆನ್‌ಲೈನ್‌ ಅಪ್ಲಿಕೇಷನ್‌ ಅನ್ನು ತಯಾರಿಸಲಾಗಿದೆ. ಇದರಿಂದ ನಾಗರೀಕರು ತಮ್ಮ ಹತ್ತಿರದ ಯೋಗ ಶಿಕ್ಷಕರು ಯಾರು ಎಂಬ ಬಗ್ಗೆ ಮಾಹಿತಿಯನ್ನು ಪಡೆಯಬಹುದಾಗಿದೆ. ಗೂಗಲ್‌ ಪ್ಲೇಸ್ಟೋರ್‌ ನಿಂದ ಕುಶಲಕೋಶ ಮೊಬೈಲ್ ಆಪ್ ಅನ್ನು ಡೌನ್‌ಲೋಡ್‌ ಮಾಡಿ, ಆನ್‌ಲೈನ್‌ ಮೂಲಕ ಯೋಗ ಶಿಕ್ಷಕರಿಂದ ಯೋಗಾಭ್ಯಾಸ ಮಾಡಬಹುದಾಗಿದೆ. ಈ ಮೊಬೈಲ್‌ ಆಪ್‌ನ ಮೂಲಕ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಯೋಗ ಶಿಕ್ಷಕರು ತಮ್ಮ ವಿವರಗಳನ್ನು ಅಪ್‌ಲೋಡ್‌ ಮಾಡಿ, ಹೆಚ್ಚಿನ ಜನರಿಗೆ ತಮ್ಮ ಕಲಿಕೆಯನ್ನು ವಿಸ್ತರಣೆ ಮಾಡಲು ಈ ಅಪ್ಲಿಕೇಷನ್‌ ಅನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಯೋಗ ಶಿಕ್ಷಕರು ಈ ಅಪ್ಲಿಕೇಶನ್ ನಲ್ಲಿ ನೊಂದಣಿ ಮಾಡಿರುವ ವಿಳಾಸವನ್ನು ನಕ್ಷೆಯೊಂದಿಗೆ ಇದು ತೋರಿಸಲಿದೆ. ಈ ಅಪ್ಲಿಕೇಶನ್‌ನಲ್ಲಿ ಕರ್ನಾಟಕ ನಕ್ಷೆಯ ಮೇಲೆ ಕ್ಲಿಕ್‌ ಮಾಡಿದಾಕ್ಷಣ ನಿಮ್ಮ ಸುತ್ತಮುತ್ತಲಿನಲ್ಲಿ ಇರುವ 5 ಯೋಗ ಬೋಧಕರ ವಿಳಾಸವನ್ನು ಪತ್ತೆ ಹಚ್ಚುತ್ತದೆ.

ಕೇವಲ ಯೋಗ ಶಿಕ್ಷಕರಿಗೆ ಸಹಾಯವಾಗುವುದು ಮಾತ್ರವಲ್ಲ,  ಎಲೆಕ್ಟ್ರಿಷಿಯನ್‌, ಪ್ಲಂಬರ್‌, ಜಿಮ್‌ ತರಬೇತುದಾರರು, ಪೇಂಟರ್‌, ಡ್ರೈ ಕ್ಲೀನರ್‌, ಕಾರ್ಪೆಂಟರ್‌  ಸೇರಿದಂತೆ ಇತರೆ ವರ್ಗಗಳ ನುರಿತ ವ್ಯಕ್ತಿಗಳನ್ನು  ಪತ್ತೆಹಚ್ಚಲು ಸಹಾಯವಾಗುವಂತೆಯೂ ಈ ಅಪ್ಲಿಕೇಶನ್ ಅನ್ನು  ವಿನ್ಯಾಸಗೊಳಿಸಲಾಗಿದೆ.  ಹೀಗಾಗಿ ಕೌಶಲ್ಯ ಹೊಂದಿರುವ ಸಿಬ್ಬಂದಿ ಈ ಅಪ್ಲಿಕೇಶನ್‌ನಲ್ಲಿ ತಮ್ಮ  ವಿಳಾಸ ಹಾಗೂ ವಿವಿರಗಳನ್ನು ನೋಂದಣಿ ಮಾಡಿಕೊಳ್ಳಬಹುದು. ಅಲ್ಲದೆ ವಿಳಾಸ ಮತ್ತು ಸಂಪರ್ಕ ವಿವರಗಳ ಹೊರತಾಗಿ, ಯೂಟ್ಯೂಬ್‌ ಲಿಂಕ್‌, ವಾಟ್ಸಾಪ್‌ ಸಂಖ್ಯೆ, ಫೇಸ್‌ಬುಕ್‌ ಪುಟವನ್ನು ಸಹ ನೋಂದಾಯಿಸಬಹು

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.