ಸ್ಥಳೀಯ ಸಂಸ್ಥೆ:ಮೈತ್ರಿಗೆ ಸೂಚನೆ

Team Udayavani, Jun 4, 2019, 6:00 AM IST

ಬೆಂಗಳೂರು: ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂ ರಾವ್‌ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್‌ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಸ್ಥಳೀಯ ಸಂಸ್ಥೆಗಳಲ್ಲಿಯೂ ಜೆಡಿಎಸ್‌ ಸಹಕಾರದೊಂದಿಗೆ ಅಧಿಕಾರ ಹಿಡಿದು, ಜೆಡಿಎಸ್‌ಗೆ ಬಹುಮತ ಇರುವ ಕಡೆ ಅವರಿಗೆ ಸಹಕಾರ ನೀಡುವಂತೆ ಗುಂಡೂರಾವ್‌ ಪಕ್ಷದ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಎರಡೂ ಪಕ್ಷಗಳ ಹೊರತಾಗಿ ಸಂಖ್ಯಾಬಲ ಕಡಿಮೆ ಇರುವ ಕಡೆಗಳಲ್ಲಿ ಪಕ್ಷೇತರರ ಬೆಂಬಲ ಪಡೆಯುವಂತೆ ತಿಳಿಸಿದ್ದಾರೆ.

ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಜತೆಗೆ ಸ್ಥಳೀಯವಾಗಿ ಹೊಂದಾಣಿಕೆ ಮಾಡಿಕೊಳ್ಳದಂತೆ ಗುಂಡೂರಾವ್‌ ಸೂಚಿಸಿದ್ದು, ತೀರಾ ಬಿಕ್ಕಟ್ಟಿನ ಸಂದರ್ಭ ಬಂದರೆ ಕೆಪಿಸಿಸಿಯೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸಿಕೊಂಡು ಅಧಿಕಾರ ಹಿಡಿಯುವಂತೆ ದಿನೇಶ್‌ ಗುಂಡೂರಾವ್‌ ಸೂಚಿಸಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ