ಎಲ್ಜೆಪಿಗೆ ಲೈಂಗಿಕ ಕಿರುಕುಳದ ಸವಾಲು
Team Udayavani, Jun 18, 2021, 12:58 AM IST
ಪಟ್ನಾ/ಹೊಸದಿಲ್ಲಿ: ಲೋಕಜನಶಕ್ತಿ ಪಕ್ಷವನ್ನು ಹತೋಟಿಯಲ್ಲಿ ಇರಿಸಿಕೊಳ್ಳುವ ಬಗ್ಗೆ ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಸ್ ನಡುವೆ ಗುದ್ದಾಟದ ನಡುವೆಯೇ ಲೈಂಗಿಕ ಕಿರುಕುಳ ಪ್ರಕರಣದ ಅಂಶ ಬೆಳಕಿಗೆ ಬಂದಿದೆ.
ಸಮಷ್ಟಿಪುರದ ಸಂಸದ ಪ್ರಿನ್ಸ್ ರಾಜ್ ಮಹಿಳೆಯೊಬ್ಬರಿಗೆ ಮತ್ತು ಬರುವ ಔಷಧ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೊಸದಿಲ್ಲಿಯ ಕನ್ಹಾಟ್ಪ್ಲೇಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದಕ್ಕೆ ಪ್ರತಿಯಾಗಿ ಸಂಸದ ಪ್ರಿನ್ಸ್ ರಾಜ್ ಕೂಡ ಮಹಿಳೆ ಸೇರಿದಂತೆ ಇಬ್ಬರ ವಿರುದ್ಧ 1 ಕೋಟಿ ರೂ. ಪಾವತಿ ಮಾಡಬೇಕು ಮತ್ತು ನಕಲಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಕ್ಕಿ ಹಾಕಿಸುವ ಬಗ್ಗೆ ಬೆದರಿಕೆಯೊಡ್ಡಿದ್ದಾರೆ ಎಂದು ದೂರು ನೀಡಿದ್ದಾರೆ. ಪೊಲೀಸರ ಜತೆಗಿನ ವಿಚಾರಣೆ ವೇಳೆ, ಮಹಿಳೆ ಪರಿಚಯ ಇತ್ತು ಎಂದು ಒಪ್ಪಿಕೊಂಡಿದ್ದಾರೆ.
ಜೂ.15ರಂದು ಮಹಿಳೆ ದೂರು ನೀಡಿದ ಬಳಿಕ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಚಿರಾಗ್ ಪಾಸ್ವಾನ್, ಪ್ರಿನ್ಸ್ ರಾಜ್ ಅವರಿಗೆ ಪೊಲೀಸರಿಗೆ ದೂರು ನೀಡುವಂತೆ ಸಲಹೆ ಮಾಡಿದ್ದಾಗಿ ಹೇಳಿದ್ದಾರೆ. ಮತ್ತೂಂದೆಡೆ, ಎಲ್ಜೆಪಿಯಿಂದ ಸಿಡಿದಿರುವ ಗುಂಪಿಗೆ ಸಂಸದ ಪಶುಪತಿ ಕುಮಾರ್ ಪರಸ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…