Lok Sabha Poll 2024: ಉತ್ತರ ಕನ್ನಡದಲ್ಲಿ 10 ಬಾರಿ ಕಾಂಗ್ರೆಸ್‌, 6 ಬಾರಿ ಕಮಲಕ್ಕೆ ಮಣೆ

ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಭಾರೀ ಪೈಪೋಟಿ ಇದೆ

Team Udayavani, Mar 26, 2024, 10:58 AM IST

Lok Sabha Poll 2024: ಉತ್ತರ ಕನ್ನಡದಲ್ಲಿ 10 ಬಾರಿ ಕಾಂಗ್ರೆಸ್‌, 6 ಬಾರಿ ಕಮಲಕ್ಕೆ ಮಣೆ

ಕಾರವಾರ: ಅರಬ್ಬಿ ಸಮುದ್ರ, ಪಡುವಣ ಘಟ್ಟ ಸಾಲು, ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆ ನಡುವಿನ
ಲೋಕಸಭಾ ಕ್ಷೇತ್ರ ಉತ್ತರ ಕನ್ನಡ. ಬ್ರಿಟಿಷರ ಕಾಲಕ್ಕೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಕೆನರಾ ಡಿಸ್ಟ್ರಿಕ್ಟ್ ಎಂದು ಕರೆಯಲ್ಪಡುತ್ತಿದ್ದವು.

ಸ್ವಾತಂತ್ರ್ಯದ ಬಳಿಕವೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರ ಕೆನರಾ ಲೋಕಸಭಾ ಕ್ಷೇತ್ರ ಎಂದೇ ಕರೆಯಲಾಗುತ್ತಿದೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳು ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿವೆ. ಈ ಸಲ ಮತದಾರರ ಸಂಖ್ಯೆ 50 ಸಾವಿರದಷ್ಟು ಹೆಚ್ಚಾಗಿದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ
16,22,857.

ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾ ಧಿಸಿದೆ. ಖಾನಾ ಪುರ, ಯಲ್ಲಾಪುರ, ಕುಮಟಾದಲ್ಲಿ ಬಿಜೆಪಿ ಗೆದ್ದಿದ್ದು, ಕಾರವಾರ, ಹಳಿಯಾಳ, ಶಿರಸಿ, ಭಟ್ಕಳ, ಕಿತ್ತೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಭಾರೀ ಪೈಪೋಟಿ ಇದೆ.

ಕ್ಷೇತ್ರದ ಇತಿಹಾಸ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ 1951ರ ಮೊದಲ ಲೋಕಸಭಾ ಚುನಾವಣೆಯಿಂದ ಸತತ ಮೂರು ಸಲ ಜೋಕಿಂದಾದ ಆಳ್ವ ಕಾಂಗ್ರೆಸ್‌ ನಿಂದ ಆಯ್ಕೆಯಾಗಿದ್ದರು. 1967ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ದೇಸಾಯಿ ಗೆದ್ದಿದ್ದರು. 1971ರಿಂದ 1991ರ ತನಕ ಸತತ 6 ಸಲ ಕಾಂಗ್ರೆಸ್‌ ಗೆದ್ದಿದ್ದು, ಈ ಪೈಕಿ ದೇವರಾಯ ಜಿ.ನಾಯ್ಕ ಸತತ  ನಾಲ್ಕು ಸಲ ಸಂಸದರಾಗಿದ್ದಾರೆ. 1996ರಲ್ಲಿ
ಬಿಜೆಪಿ ಮೊದಲ ಬಾರಿ ಅನಂತ ಕುಮಾರ್‌ ಹೆಗಡೆ ಮೂಲಕ ಗೆದ್ದಿದೆ. 1998ರಲ್ಲಿ ಮತ್ತೆ ಕಮಲ ಅರಳಿತು. 1999ರಲ್ಲಿ ಜೊಕಿಂ ಆಳ್ವರ ಸೊಸೆ ಮಾರ್ಗರೆಟ್‌ ಆಳ್ವ ಮತ್ತೆ ಕಾಂಗ್ರೆಸ್‌ನಿಂದ ಗೆದ್ದರು.

ಆದರೆ 5 ವರ್ಷಗಳ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ಮಾರ್ಗರೆಟ್‌ ಅವರು ಬಿಜೆಪಿ ಎದುರು ಸೋತಿದ್ದರು. 2014, 2019ರಲ್ಲೂ ಬಿಜೆಪಿ ಗೆಲ್ಲುವ ಮೂಲಕ ಒಟ್ಟು 6 ಸಲ ಗೆಲವು ಸಾಧಿಸಿದೆ. ಹತ್ತು ಸಲ ಗೆದ್ದಿದ್ದ ಕಾಂಗ್ರೆಸ್‌ ಈಗ ಮತ್ತೆ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ಭಾರೀ ಪ್ರಯತ್ನ ಪಡುತ್ತಿದೆ.

ಕ್ಷೇತ್ರದಲ್ಲಿ ನಿರ್ಣಾಯಕರು
ಈ ಕ್ಷೇತ್ರದಲ್ಲಿ ಮರಾಠರು, ನಾಮಧಾರಿಗಳು, ಮೀನುಗಾರರು, ದಲಿತರು, ಅಲ್ಪಸಂಖ್ಯಾಕರ ಮತಗಳು ನಿರ್ಣಾಯಕ. ಲೋಕಸಭಾ ಚುನಾವಣೆಯಲ್ಲಿ ಶಿರಸಿಯವರೇ ಹತ್ತು ಸಲ ಲೋಕಸಭಾ  ಸದಸ್ಯರಾಗಿದ್ದಾರೆ. ನಾಮಧಾರಿಗಳು ನಾಲ್ಕು ಸಲ, ಮರಾಠರು ಒಂದು ಸಲ, ಕರಾವಳಿ ತಾಲೂಕಿನಿಂದ ಕೊಂಕಣಿ, ನಾಡವರು ತಲಾ ಒಂದೊಂದು ಸಲ, ಹವ್ಯಕ ಸಮುದಾಯದ ಅನಂತ್‌ ಕುಮಾರ್‌ ಹೆಗಡೆ ಆರು ಸಲ ಕೆನರಾ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ. ಕ್ರಿಶ್ಚಿಯನ್ನರು ನಾಲ್ಕು ಸಲ (ಜೋಕಿಂ ಆಳ್ವ ಮೂರು ಸಲ, ಮಾರ್ಗರೆಟ್‌ ಆಳ್ವ ಒಮ್ಮೆ) ಗೆದ್ದಿದ್ದಾರೆ. ಈ ಬಾರಿ ಅನಂತಕುಮಾರ್‌ ಬದಲು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್‌ ಕಣಕ್ಕಿಳಿದಿದ್ದಾರೆ.

*ನಾಗರಾಜ್‌ ಹರಪನಹಳ್ಳಿ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.