
ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ
Team Udayavani, Jun 20, 2021, 8:52 PM IST

ಚಿಕ್ಕೋಡಿ/ಮಂಡ್ಯ: ಅಪ್ಪಂದಿರ ದಿನದಂದೇ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡರೆ, ಮತ್ತೂಂದು ಪ್ರಕರಣದಲ್ಲಿ ಮಗಳ ಆತ್ಮಹತ್ಯೆಯಿಂದ ಮನನೊಂದ ತಂದೆ ಆಘಾತದಿಂದ ಸಾವನ್ನಪ್ಪಿದ್ದಾರೆ.
ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಕಾಡಪ್ಪ ಪ್ರಧಾನಿ ರಂಗಾಪೂರೆ(48), ಹೆಣ್ಣುಮಕ್ಕಳಾದ ಕೀರ್ತಿ (18), ಸ್ಫೂರ್ತಿ (16) ಜತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾರದ ಹಿಂದೆ ಚೆನ್ನವ್ವ ಕಾಡಪ್ಪ ರಂಗಾಪೂರೆ ಹೃದಯಘಾತದಿಂದ ಮೃತಪಟ್ಟಿದ್ದರು. ಪತ್ನಿ ಸಾವಿಗೆ ಮನನೊಂದು ಪತಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ
ಮಗಳ ಅಗಲಿಕೆ; ಆಘಾತಕ್ಕೊಳಗಾಗಿ ಸಾವು
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದಲ್ಲಿ ಬಾಂಧವ್ಯ(17)ಆತ್ಮಹತ್ಯೆಯಿಂದ ಮನನೊಂದಿದ್ದ ಆಕೆಯ ತಂದೆ ರಾಜು (65) ಆಘಾತಕ್ಕೊಳಗಾಗಿ ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ. ಆನ್‌ಲೈನ್ ತರಗತಿಗಳಿಂದ ಖನ್ನತೆಗೆ ಒಳಗಾಗಿದ್ದ ಬಾಂಧವ್ಯ, ವಿದ್ಯಾಭ್ಯಾಸ ಕುಂಠಿತವಾಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ತಿಳಿದು ಬಂದಿದೆ. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92 ಅಂಕ ಪಡೆದಿದ್ದಳು. ನಂತರ ಬನ್ನೂರು ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಮಧ್ಯರಾತ್ರಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme ಬಗ್ಗೆ ಪ್ರತಿಭಟನೆ ಮಾಡಲು ಬಿಜೆಪಿಗೆ ನೈತಿಕ ಹಕ್ಕಿಲ್ಲ; ಸಿದ್ದರಾಮಯ್ಯ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
