ಬಿಜೆಪಿ ಚುನಾವಣೆಗೆ ಸನ್ನದ್ಧ: ಸುದರ್ಶನ್‌

Team Udayavani, Mar 28, 2023, 6:05 AM IST

ಬಿಜೆಪಿ ಚುನಾವಣೆಗೆ ಸನ್ನದ್ಧ: ಸುದರ್ಶನ್‌

ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಸನ್ನದ್ಧರಾಗಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ.

ಈಗಾಗಲೇ ಒಂದು ಹಂತದಲ್ಲಿ ಬೂತ್‌ ಮಟ್ಟದ ಪ್ರಚಾರ ಕಾರ್ಯ ಮುಗಿದಿದೆ. ಎಲ್ಲ ಮೋರ್ಚಾ ಸಭೆಗಳು ಪೂರ್ತಿಯಾಗಿವೆ. ವಿಜಯ ಸಂಕಲ್ಪ ಯಾತ್ರೆಯೂ ಆಗಿದೆ. ಬೂತ್‌ ಪ್ರಮುಖ್‌, ಪೇಜ್‌ ಪ್ರಮುಖ್‌ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ ಆಧಾರದಲ್ಲಿ ಈ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

ಐತಿಹಾಸಿಕ ನಿರ್ಧಾರ
ರಾಜ್ಯದ ಪರಿಶಿಷ್ಟ ಸಮುದಾಯದ 3 ದಶಕಗಳ ಮೀಸಲಾತಿ ಬೇಡಿಕೆ ಈಡೇರಿಸುವುದರೊಂದಿಗೆ ಬಸವರಾಜ ಬೊಮ್ಮಾಯಿ ಸರಕಾರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಈ ಹಿಂದಿನ ಎಲ್ಲ ಸರಕಾರಗಳು ಮೀಸಲಾತಿ ಭರವಸೆ ನೀಡಿದ್ದರೂ ಈಡೇರಿಸಿಲ್ಲ. ಈಗ ಬಿಜೆಪಿ ಸರಕಾರ ಕೈಗೊಂಡಿರುವ ನಿರ್ಧಾರವನ್ನು ರಾಜ್ಯದ ಜನತೆ ಸ್ವಾಗತಿಸಿದ್ದಾರೆ ಎಂದರು.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೆ ಏರಿಕೆ ಮಾಡಿದ್ದರೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಏರಿಸಿ ನಿರ್ಣಯ ಕೈಗೊಳ್ಳಲಾಗಿದೆ. ಪರಿಶಿಷ್ಟ ಸಮುದಾಯದೊಳಗೆ ಬಲ ಪಂಗಡಕ್ಕೆ ಶೇ. 5.5 ಒಳ ಮೀಸಲಾತಿ ನೀಡಿದ್ದರೆ, ಎಡ ಪಂಗಡಕ್ಕೆ ಶೇ. 6, ಲಂಬಾಣಿ-ಬೋವಿ ಸಮುದಾಯಕ್ಕೆ ಶೇ. 4.5, ಅಲೆಮಾರಿ ಅರೆ ಅಲೆಮಾರಿ ಸಮುದಾಯಕ್ಕೆ ಶೇ. 1 ಒಳ ಮೀಸಲಾತಿ ಕಲ್ಪಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಲಿಂಗಾಯತ ಸಮುದಾಯವನ್ನು 2ಡಿ ಕೆಟಗರಿಗೆ ತರುವ ಮೂಲಕ ಶೇ. 5ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಅದೇ ರೀತಿ ಒಕ್ಕಲಿಗ ಸಮುದಾಯವನ್ನು 2ಸಿ ಕೆಟಗರಿಗೆ ತಂದು ಶೇ. 4ರಿಂದ 6ಕ್ಕೆ ಮೀಸಲಾತಿ ಏರಿಕೆ ಮಾಡಿರುವುದು ಸ್ವಾಗತಾರ್ಹ ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಕಸ್ತೂರಿ ಪಂಜ, ಸುಧೀರ್‌ ಶೆಟ್ಟಿ ಕಣ್ಣೂರು, ಜಗದೀಶ ಶೇಣವ ಇದ್ದರು.

ಟಿಕೆಟ್‌ ವರಿಷ್ಠರ ತೀರ್ಮಾನ
ಮೂಡುಬಿದಿರೆ ಕ್ಷೇತ್ರದಲ್ಲಿ ತನ್ನ ಸ್ಪರ್ಧಾಕಾಂಕ್ಷೆಯ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸುದರ್ಶನ್‌ ಮೂಡುಬಿದಿರೆ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಅಭ್ಯರ್ಥಿಗಳ ಬದಲಾವಣೆ ಸೇರಿದಂತೆ ಎಲ್ಲ ತೀರ್ಮಾನಗಳನ್ನು ವರಿಷ್ಠ ನಾಯಕರು ಕೈಗೊಳ್ಳಲಿದ್ದಾರೆ ಎಂದರು.

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.