ಮೇ 29ರ ಕಾಂಗ್ರೆಸ್‌ ಶಾಸಕಾಂಗ ಸಭೆ ಮೇಲೆ ಕುತೂಹಲ

Team Udayavani, May 26, 2019, 6:10 AM IST

ಬೆಂಗಳೂರು: ಲೋಕಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಮೇ 29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು ಕುತೂಹಲ ಮೂಡಿಸಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಪರಾಮರ್ಶಿಸಲು ಶಾಸ ಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಸಿಎಲ್ಪಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಲ್ಲ ಶಾಸಕರಿಗೆ ಪತ್ರ ರವಾನೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಫ‌ಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ನಗರದ ಅಶೋಕಾ ಹೊಟೇಲ್ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಉಪಸ್ಥಿತರಲಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅಲ್ಲಿಂದಲೇ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದಾರೆ. ಹೈಕಮಾಂಡ್‌ ಸೂಚನೆ ಮೇರೆಗೆ ಸಭೆ ಕರೆಯಲಾಗಿದೆೆ.

ದಿಲ್ಲಿ ಭೇಟಿ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಮಾತನಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಪಕ್ಷೇತರ ಸದಸ್ಯ ಶಂಕರ್‌ ಭೇಟಿ

ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ದಿಲ್ಲಿಗೆ ತೆರಳಿದ್ದ ಸಿದ್ದರಾಮಯ್ಯ ಅವರನ್ನು ಪಕ್ಷೇತರ ಶಾಸಕ ಆರ್‌. ಶಂಕರ್‌ ಭೇಟಿ ಮಾಡಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಆಪರೇಷನ್‌ ಕಮಲ ಕಾರ್ಯಾಚರಣೆ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಶಂಕರ್‌ ಈಗ ದಿಢೀರ್‌ ಸಿದ್ದರಾಮಯ್ಯ ಅವರ ಜತೆಯೇ ವಿಮಾನದಲ್ಲಿ ದಿಲ್ಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.

ಮೈತ್ರಿ ಸರಕಾರ ರಚನೆಯಾದ ಅನಂತರ ಲೋಕಸಭಾ ಚುನಾವಣೆಗೆ ಒಟ್ಟಾಗಿ ಹೋಗಿದ್ದರೂ ಅನಿರೀಕ್ಷಿತ ಫ‌ಲಿತಾಂಶ ಬಂದಿದೆ. ಕಾಂಗ್ರೆಸ್‌ ಒಂದು ಸೀಟು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಇಷ್ಟು ಕಡಿಮೆ ಸೀಟು ಬರುತ್ತದೆ ಎಂದುಕೊಂಡಿರ ಲಿಲ್ಲ. ಫ‌ಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ಅವರು ಕೈಗೊಳ್ಳುವ ಮುಂದಿನ ಯಾವುದೇ ತೀರ್ಮಾನಕ್ಕೆ ನಾನು ಬದ್ಧ.

– ದಿನೇಶ್‌ ಗುಂಡೂರಾವ್‌ , ಕೆಪಿಸಿಸಿ ಅಧ್ಯಕ್ಷ

ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯುಂಟಾಗಿದ್ದರಿಂದ ಸಿಎಂ ಸ್ಥಾನ ತ್ಯಜಿಸಿ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಮುಂದಾಗಿರುವ ಜೆಡಿಎಸ್‌, ಆರ್‌.ವಿ.ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತು ವಿಧಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ 2ಸ್ಥಾನಗಳು ಮಾತ್ರ ಬಂದಿದ್ದರಿಂದ ಒತ್ತಡ ಬಂದರೆ ಸಿಎಂ ಸ್ಥಾನ ಬಿಟ್ಟುಕೊಡಲು ಕುಮಾರಸ್ವಾಮಿ ಬಯಸಿದ್ದರು. ಆದರೆ ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತನ್ನು ಮಾಜಿ ಪ್ರಧಾನಿ ದೇವೇಗೌಡ ವಿಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶಪಾಂಡೆ ಅಸ್ತ್ರ?

ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯುಂಟಾಗಿದ್ದರಿಂದ ಸಿಎಂ ಸ್ಥಾನ ತ್ಯಜಿಸಿ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಮುಂದಾಗಿರುವ ಜೆಡಿಎಸ್‌, ಆರ್‌.ವಿ.ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತು ವಿಧಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ 2ಸ್ಥಾನಗಳು ಮಾತ್ರ ಬಂದಿದ್ದರಿಂದ ಒತ್ತಡ ಬಂದರೆ ಸಿಎಂ ಸ್ಥಾನ ಬಿಟ್ಟುಕೊಡಲು ಕುಮಾರಸ್ವಾಮಿ ಬಯಸಿದ್ದರು. ಆದರೆ ದೇಶಪಾಂಡೆ ಅವರನ್ನು ಸಿಎಂ ಮಾಡಬೇಕು ಎಂಬ ಷರತ್ತನ್ನು ಮಾಜಿ ಪ್ರಧಾನಿ ದೇವೇಗೌಡ ವಿಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ